ರಾಯಚೂರು | ಹೋರಾಟದ ದನಿ ‘ಗದ್ದರ್‌’ ಶ್ರದ್ಧಾಂಜಲಿ ಸಭೆ

Date:

Advertisements

ಶೋಷಿತ ಜನರ ಧ್ವನಿಯಾಗಿ ಜೀವನಪೂರ್ತಿ ಹೋರಾಟ ನಡೆಸಿದ ಪ್ರಜಾಗಾಯಕ ಗದ್ದರ್ ಅಗಲಿಕೆಯಿಂದ ದೊಡ್ಡ ಧ್ವನಿಯೊಂದು ನಿಂತು ಹೋದಂತಾಗಿದೆ ಎಂದು ಹೋರಾಟಗಾರ ಅಂಬಣ್ಣ ಆರೋಲಿ ಹೇಳಿದರು.

ರಾಯಚೂರಿನಲ್ಲಿ ವಿವಿಧ ಸಂಘಟನೆಗಳು ಆಯೋಜಿಸಿದ್ದ ಗದ್ದರ್ ಶ್ರದ್ದಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. “ಗದ್ದರ್ ಅವರು ಬ್ಯಾಂಕ್ ಹುದ್ದೆ ಬಿಟ್ಟು, ಕುಟುಂಬವನ್ನು ತೊರೆದು ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು” ಎಂದು ಸ್ಮರಿಸಿದರು.

“ಅವರು ಕೇವಲ ಒಂದು ರಾಜ್ಯಕ್ಕೆ ಸೀಮಿತವಾಗದೇ ಇಡೀ ದೇಶದ ಆದಿವಾಸಿಗಳು, ದಲಿತರು, ಶೋಷಿತರ ಧ್ವನಿಯಾಗಿ ನಡೆಸಿದ ಹೋರಾಟ ಸ್ಪೂರ್ತಿಯಾಗಿದ್ದಾರೆ. ಅವರು ಗೆಜ್ಜೆ ಕಟ್ಟಿ ಹಾಡಿದ ಕ್ರಾಂತಿಕಾರಿ ಹಾಡುಗಳು ಅದೆಷ್ಟೋ ಯುವಕ ಯುವತಿಯರಿಗೆ ಸ್ಪೂರ್ತಿ ನೀಡಿದೆ” ಎಂದರು.

Advertisements

ಸಭೆಯಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಸಂಚಾಲಕ ನರಸಿಂಹಮೂರ್ತಿ, ಜನಾರ್ಧನ ಹಳ್ಳಿಬೆಂಚಿ, ಕೆ.ಪಿ.ಅನಿಲ್ ಕುಮಾರ, ಬಸವರಾಜ ಹೊಸೂರು ಸೇರಿದಂತೆ ಅನೇಕ ಸಂಘಟನೆಗಳ ಪ್ರತಿನಿಧಿಗಳು, ಮಹಿಳೆಯರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮಟ್ಕಾ, ಜೂಜಾಟದ ಅಡ್ಡೆ ಮೇಲೆ ದಾಳಿ; ಮೂವರ ಬಂಧನ

ಸಾರ್ವಜನಿಕ ಸ್ಥಳದಲ್ಲಿ ನಡೆದ ಮಟಕಾ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಾಳಿ...

ರಾಯಚೂರು | ಉರ್ದು ಹಿರಿಯ ಪ್ರಾಥಮಿಕ ಶಾಲೆ SDMC ಹೊಸ ಅಧ್ಯಕ್ಷ- ಬಂದೇನವಾಜ ಜಾಲಹಳ್ಳಿ ಆಯ್ಕೆ

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ...

ರಾಯಚೂರು | ನವಜಾತ ಶಿಶುವನ್ನು ರಸ್ತೆ ಬದಿ ಬಿಟ್ಟು ಹೋದ ಪೋಷಕರು!

ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮದ ಕಲ್ಲೂರು ರಸ್ತೆಯ ಬಳಿಯಲ್ಲಿ ಇಂದು ಹೃದಯವಿದ್ರಾವಕ...

ರಾಯಚೂರು | ಗ್ರಾಮವನ್ನು ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿಸಬಾರದು : ಗ್ರಾಮಸ್ಥರ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆರಿಸಬಾರದು ಎಂದು ರಾಜ್ಯ...

Download Eedina App Android / iOS

X