ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಇಬ್ಬರು ಬಾಲಕಿಯರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಖೈರೇನ್ ದೇಶನಗರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಅವರ ತಾತ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಭಾನುವಾರದಿಂದ ಭಾರೀ ಮಳೆಯಾಗುತ್ತಿದೆ.
ಮೃತ ಬಾಲಕಿಯರನ್ನು ಚಾಂದನಿ (14) ಮತ್ತು ಶಿವಸಿ (12) ಎಂದು ಗುರುತಿಸಲಾಗಿದೆ. ರಾಂಪಾಲ್ (60) ತೀವ್ರವಾಗಿ ಗಾಯಗೊಂಡಿದ್ದಾರೆ. ಗೋಡೆ ಕುಸಿದು ಮೂವರು ಅವಶೇಷಗಳ ಅಡಿ ಸಿಲುಕಿದ್ದರು. ಸ್ಥಳೀಯ ನಿವಾಸಿಗಳು ರಕ್ಷಿಸಿ ಸಮುದಾಯ ಆರೋಗ್ಯ ಕೇಂದ್ರಕ್ಕೆ (ಸಿಎಚ್‌ಸಿ) ಕರೆದೊಯ್ದಿದ್ದಾರೆ.
ಇದನ್ನು ಓದಿದ್ದೀರಾ? ದೆಹಲಿ | ಮದರಸಾದಲ್ಲಿ ಬಾಲಕ ನಿಗೂಢವಾಗಿ ಸಾವು
ಆಸ್ಪತ್ರೆಯಲ್ಲಿ ಇಬ್ಬರು ಬಾಲಕಿಯರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ರಾಂಪಾಲ್ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಇನ್ನು ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಜಿಲ್ಲಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವುದಾಗಿ ಭರವಸೆ ನೀಡಿದ್ದಾರೆ.
