ಗ್ರಾಮ ಪಂಚಾಯತಿಯ ಅರಿವು ಕೇಂದ್ರಗಳಲ್ಲಿ ʼಭಾರತದ ಸ್ವಾತಂತ್ರ್ಯ ಸಂಭ್ರಮೋತ್ಸವʼ : ಸಚಿವ ಪ್ರಿಯಾಂಕ್‌ ಖರ್ಗೆ

Date:

Advertisements

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ‘ಓದುವ ಬೆಳಕು’ ಕಾರ್ಯಕ್ರಮದಡಿ ಗ್ರಾಮ ಪಂಚಾಯತಿಗಳ ಅರಿವು ಕೇಂದ್ರಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ವಿಜ್ಞಾನ ಚಟುವಟಿಕೆಗಳೊಂದಿಗೆ ಮಕ್ಕಳಿಗಾಗಿ ಆಗಸ್ಟ್ ತಿಂಗಳ ಕಾರ್ಯಕ್ರಮಗಳನ್ನು ಸಜ್ಜುಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

2025ರ ಆಗಸ್ಟ್ ತಿಂಗಳಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಕ್ಕಳಿಗಾಗಿ ದೇಶಪ್ರೇಮ ಮೆರೆವ ಪ್ರೇರಣಾತ್ಮಕ ಹಾಗೂ ವೈಜ್ಞಾನಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಮಾಸ ಪೂರ್ಣ ‘ಭಾರತದ ಸ್ವಾತಂತ್ರ್ಯ ದಿನಾಚರಣೆ’ ಸಂಭ್ರಮೋತ್ಸವ ಆಚರಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟದ ಘಟನೆಗಳು, ಸ್ವಾತಂತ್ರ್ಯ ಹೋರಾಟಗಾರರ ಕುರಿತಾದ ಪುಸ್ತಕಗಳ ಗಟ್ಟಿ ಓದು ಮಾಡುವುದು, ಭಾಷಣಗಳು ಮತ್ತು ಚರ್ಚೆಗಳನ್ನು ಏರ್ಪಡಿಸುವುದು, ಮಕ್ಕಳೇ ತಯಾರಿಸಿದ ತ್ರಿವರ್ಣ ಧ್ವಜ ಬ್ಯಾಡ್ಜನ್ನು ಆಗಸ್ಟ್ 15ರಂದು ಧರಿಸಲು ಮಕ್ಕಳನ್ನು ಸಿದ್ಧಪಡಿಸುವುದು, ಪ್ರಬಂಧ, ಕವನ, ಚಿತ್ರರಚನೆ ಮಾಡಲು ಅವಕಾಶ ಕಲ್ಪಿಸುವುದು, ಮಕ್ಕಳು ಸಾಮೂಹಿಕವಾಗಿ ಸಂವಿಧಾನದ ಪೀಠಿಕೆ ಓದುವಂತೆ ಪ್ರೋತ್ಸಾಹಿಸುವುದು, ದೇಶಭಕ್ತಿ ಗೀತೆಗಳ ಅಭ್ಯಾಸ ಹಾಗೂ ಗಾಯನ ಮತ್ತು ದೇಶಭಕ್ತರ ಸಾಕ್ಷ್ಯಚಿತ್ರಗಳ ಪ್ರದರ್ಶನ, ಸ್ವಾತಂತ್ರ ಹೋರಾಟಗಾರರ ಪರಿಚಯ, ಸ್ಥಳೀಯ ಹಿರಿಯರು, ಶಿಕ್ಷಕರನ್ನು ಒಳಗೊಂಡಂತೆ ‘ನಾನು ಮತ್ತು ನನ್ನ ದೇಶ’ ಕುರಿತು ಮಕ್ಕಳಿಂದ ಚರ್ಚೆಗಳನ್ನು ನಡೆಸುವುದರ ಮೂಲಕ ದೇಶಭಕ್ತಿ ಉದ್ದೀಪನಗೊಳಿಸುವುದು ಮುಂತಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನಿಡಿದ್ದಾರೆ.

Advertisements

ವಿಜ್ಞಾನ ಚಟುವಟಿಕೆ:

ಅರಿವು ಕೇಂದ್ರಗಳಲ್ಲಿ ‘ಕ್ರೀಮ್ ಬಿಸ್ಕೆಟ್ ಜೊತೆ ಚಂದ್ರನ ಹಂತಗಳು’ ಎಂಬ ವಿಶೇಷ ಕಾರ್ಯಕ್ರಮವನ್ನು ಮಕ್ಕಳಿಗಾಗಿ ಆಗಸ್ಟ್ ತಿಂಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿರುವ ಸಚಿವರು, ಭಾರತೀಯ ಖಗೋಳ ಭೌತವಿಜ್ಞಾನ ಸಂಸ್ಥೆಯ ಸಹಕಾರದಲ್ಲಿ ಈ ವಿಜ್ಞಾನ ಚಟುವಟಿಕೆ ಕೈಗೊಳ್ಳಲಾಗುತ್ತಿದೆ, ಚಂದ್ರನ ವೃದ್ಧಿಸುವ ಮತ್ತು ಕ್ಷೀಣಿಸುವ ವಿವಿಧ ಹಂತಗಳನ್ನು ಬಿಸ್ಕೆಟ್ ಬಳಸಿ ಪ್ರಾತ್ಯಕ್ಷಿಕೆ ಮೂಲಕ ಮಕ್ಕಳಿಗೆ ಬೋಧನೆ – ವಿಜ್ಞಾನದಲ್ಲಿ ಆಸಕ್ತಿ ಮೂಡಿಸಲು ವಿನೋದದ ಕಸರತ್ತುನಡೆಸಲಾಗುವುದು, ಈ ಚಟುವಟಿಕೆಯು ಮಕ್ಕಳಲ್ಲಿ ನಿಗಾಶಕ್ತಿ , ಕಲ್ಪನೆ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ನಿಜವಾದ ಭಾರತೀಯರಾಗಿದ್ದರೆ ಈ ಹೇಳಿಕೆ ನೀಡುತ್ತಿರಲಿಲ್ಲ: ರಾಹುಲ್ ಗಾಂಧಿ ವಿರುದ್ದ ಸುಪ್ರೀಂ ತರಾಟೆ

ಅರಿವು ಕೇಂದ್ರಗಳಲ್ಲಿ ಪ್ರತಿ ತಿಂಗಳೂ ಹಲವಾರು ಅಭಿಯಾನಗಳ ಮೂಲಕ ಮಕ್ಕಳಿಗಾಗಿ ಉಪಯುಕ್ತ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಮಕ್ಕಳು ಈ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ನಲಿಯುವುದರ ಜೊತೆಗೆ ಅವರ ಅರಿವಿನ ಬೆಳಕು ಪ್ರಖರಗೊಳ್ಳಲು ಕಾರಣವಾಗುತ್ತದೆ ಎಂದು ಸಚಿವ ಖರ್ಗೆ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X