ಸೌಹಾರ್ದ ಸಮಾಜಕ್ಕಾಗಿ ಆಂದೋಲನ ರೂಪಿಸಬೇಕಿದೆ: ಜಮಾಅತೆ ಇಸ್ಲಾಮಿ ಹಿಂದ್

Date:

Advertisements

ಬೆಳಗಾವಿಯ ಶಾಲೆಯೊಂದರ ಕುಡಿಯುವ ನೀರಿನ ತೊಟ್ಟಿಗೆ ವಿಷ ಹಾಕಿ ಮಕ್ಕಳ ಸಾಮೂಹಿಕ ಹತ್ಯೆಗೆ ಮುಂದಾಗಿದ್ದ ಪ್ರಕರಣವು ರಾಜ್ಯದಲ್ಲಿ ಕೋಮುದ್ವೇಷ ಹರಡುವ ದುರುದ್ದೇಶ ಹೊಂದಿದೆ. ಈ ನಿಟ್ಟಿನಲ್ಲಿ ಪ್ರಸ್ತುತ ಸೌಹಾರ್ದ ಸಮಾಜಕ್ಕಾಗಿ ಜನಾಂದೋಲನ ರೂಪಿಸಬೇಕಾಗಿದ ಅವಶ್ಯಕತೆ ಇದೆ ಎಂದು ಜಮಾಅತೆ ಇಸ್ಲಾಮಿ ಹಿಂದ್‌ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಡಾ.ಮೊಹಮ್ಮದ್ ಸಾದ್ ಕರೆಕೊಟ್ಟಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಅವರನ್ನು ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲೆಯ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಅತ್ಯಂತ ಹೀನ ಕೃತ್ಯವು ಕೆಳದಿನಗಳ ಹಿಂದೆಯಷ್ಟೇ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿತ್ತು. ಘಟನೆಯಲ್ಲಿ ವಿದ್ಯಾರ್ಥಿಗಳು ವಿಷಪೂರಿತ ನೀರು ಕುಡಿದು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿರಲಿಲ್ಲ. ಈ ಕೃತ್ಯವನ್ನು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕವು ತೀವ್ರವಾಗಿ ಖಂಡಿಸಿ, ಕೋಮುವೈಷಮ್ಯ ಆಧಾರಿತ ಪ್ರಕರಣಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.

“ಒಂದು ಧರ್ಮದ ಮೇಲಿನ ದ್ವೇಷವು ಮುಗ್ಧ ಮಕ್ಕಳನ್ನು ಕೊಲ್ಲುವ ಹಂತಕ್ಕೆ ತಲುಪುವುದಾದರೆ ಯಾವ ರೀತಿ ಕೋಮು ವೈಷಮ್ಯವನ್ನು ವ್ಯವಸ್ಥಿತವಾಗಿ ಬಿತ್ತಲಾಗಿದೆ ಎಂಬುವುದನ್ನು ಈ ಘಟನೆ ಸ್ಪಷ್ಟಪಡಿಸುತ್ತದೆ. ರಾಜಕೀಯ ಲಾಭಕ್ಕಾಗಿ ಸೃಷ್ಟಿಸಿದ ಮುಸ್ಲಿಮರ ಮೇಲಿನ ದ್ವೇಷದ ಮನಸ್ಥಿತಿ ಇಷ್ಟೊಂದು ನೀಚ ಮಟ್ಟಕ್ಕೆ ಇಳಿದಿದೆ ಎಂದರೆ ಮುಂದೆ ಇದು ಯಾವ ಬಗೆಯ ದುರಂತಕ್ಕೆ ಕಾರಣವಾಗಬಹುದು ಎಂಬ ಆತಂಕವನ್ನು ಸೃಷ್ಟಿಸುತ್ತದೆ” ಎಂದು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ಕಳವಳ ವ್ಯಕ್ತಪಡಿಸಿದೆ.

Advertisements

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ಎರಡನೇ ದಿನದ ಅಗೆತ ಕಾರ್ಯಾಚರಣೆ ಆರಂಭ

“ಧರ್ಮ ರಕ್ಷಣೆಯ ಹೆಸರಿನಲ್ಲಿ ಇನ್ನೊಂದು ಧರ್ಮದ ಬಗೆಗೆ ತಪ್ಪು ಮಾಹಿತಿ, ಸುಳ್ಳು ಸುದ್ದಿ ಹಾಗೂ ದ್ವೇಷ ಭಾಷಣಗಳ ಮೂಲಕ ಸೃಷ್ಟಿಸಿರುವ ಅಪನಂಬಿಕೆಗಳು, ಪೂರ್ವಾಗ್ರಹ ವಿಚಾರಗಳು ಹೇಗೆ ಸಮಾಜಘಾತುಕ ಶಕ್ತಿಗಳಾಗಿ ಪರಿವರ್ತನೆ ಆಗುತ್ತವೆ ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ. ʼಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಸಾಮಾಜಿಕ ಸ್ವಾಸ್ಥ್ಯವನ್ನು ಖಚಿತಪಡಿಸುವ ಅಗತ್ಯವಿದೆ” ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X