ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಖಾಸಗಿ ವಾಹನ ಮಾಲೀಕರು ತುರ್ತು ಸೇವೆಗಳನ್ನು ಒದಗಿಸಬೇಕು ಎಂದು ಹೊನ್ನಾವರ ತಹಶೀಲ್ದಾರ್ ಪ್ರವೀಣ್ ಕರಾಂಡೆ ಮನವಿ ಮಾಡಿದರು.
ಜನಸಾಮಾನ್ಯರ ಅನುಕೂಲಕ್ಕಾಗಿ ಸಹಕರಿಸುವಂತೆ ಸಂಘ-ಸಂಸ್ಥೆಗಳ ಬೆಂಬಲವನ್ನೂ ಕೋರಿದರು. ಈ ಸಭೆಯು ಬಸ್ ಮುಷ್ಕರದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪರ್ಯಾಯ ಸಾರಿಗೆ ವ್ಯವಸ್ಥೆ ಒದಗಿಸುವ ಕುರಿತು ಚರ್ಚಿಸಲು ಸಹಕಾರಿಯಾಯಿತು.
ಈ ಸುದ್ದಿ ಒದಿದ್ದೀರಾ? ಯಾದಗಿರಿ | ಹಾಸ್ಟೆಲ್, ವಸತಿ ಶಾಲಾ ಹೊರಗುತ್ತಿಗೆ ನೌಕರರಿಗೆ ಮಾಸಿಕ ₹36 ವೇತನಕ್ಕೆ ಆಗ್ರಹ
ಸಭೆಯಲ್ಲಿ ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ವಾಹನಗಳ ಮಾಲೀಕರು ಇದ್ದರು.