ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದ ಹಿನ್ನೆಲೆ ತುಮಕೂರು ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆಯಬೇಕಾಗಿದ್ದ ಎಲ್ಲ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
‘ಮುಂಚಿತವಾಗಿ ಪರೀಕ್ಷೆ ಮುಂದೂಡಬೇಕಿತ್ತು. ವಿದ್ಯಾರ್ಥಿಗಳು ಕಾಲೇಜಿಗೆ ಬಂದ ನಂತರ ಪರೀಕ್ಷೆ ಮುಂದೂಡಲಾಗಿದೆ ಎನ್ನುತ್ತಿದ್ದಾರೆ. ಹಳ್ಳಿ ಕಡೆಯಿಂದ ಕಷ್ಟಪಟ್ಟು ಕಾಲೇಜಿಗೆ ಬಂದಿದ್ದೇವೆ. ಮುಂಚೆಯೇ ತಿಳಿಸಿದ್ದರೆ ನಮ್ಮ ಪರದಾಟ ತಪ್ಪುತ್ತಿತ್ತು’ ಎಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದರು.
ಮರು ನಿಗದಿಯಾದ ದಿನಾಂಕಗಳನ್ನು ಮುಂದೆ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲ ಸಚಿವರು ತಿಳಿಸಿದ್ದಾರೆ.