ದೀರ್ಘಕಾಲದ ಅನಾರೋಗ್ಯದ ನಂತರ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮಂಗಳವಾರ ತಮ್ಮ 79ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
2018ರ ಆಗಸ್ಟ್ 2019ರ ಅಕ್ಟೋಬರ್‌ವರೆಗೆ ಮಲಿಕ್ ಅವರು ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಅವರ ಅಧಿಕಾರಾವಧಿಯಲ್ಲಿಯೇ ಅಂದರೆ 2019ರ ಆಗಸ್ಟ್ 5ರಂದು 370ನೇ ವಿಧಿಯನ್ನು ರದ್ದುಗೊಳಿಸಲಾಗಿತ್ತು. ಅದಾದ ಬಳಿಕ ಗೋವಾದ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು. ಅದಾದ ಬಳಿಕ 2022ರ ಅಕ್ಟೋಬರ್‌ನಲ್ಲಿ ಮೇಘಾಲಯದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು.
ಇದನ್ನು ಓದಿದ್ದೀರಾ? ಕೇಜ್ರಿವಾಲ್ ಬಂಧನ | ಸತ್ಯಪಾಲ್ ಮಲಿಕ್ ಭವಿಷ್ಯ ನುಡಿದ ವಿಡಿಯೋ ವೈರಲ್
1970ರ ದಶಕದಲ್ಲಿ ಮಲಿಕ್ ರಾಜಕೀಯ ಜೀವನ ಆರಂಭವಾಗಿದೆ. 1974ರಲ್ಲಿ ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯರಾದರು. ಭಾರತೀಯ ಕ್ರಾಂತಿ ದಳ ಟಿಕೆಟ್ ಮೂಲಕ ಬಾಗ್‌ಪತ್ ಅನ್ನು ಪ್ರತಿನಿಧಿಸಿ ಸ್ಪರ್ಧಿಸಿದರು.
ಅದಾದ ಬಳಿಕ ಲೋಕದಳದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. 1980ರಿಂದ 1989ರವರೆಗೆ ರಾಜ್ಯಸಭೆಯಲ್ಲಿ ಉತ್ತರ ಪ್ರದೇಶದಿಂದ ಸಂಸದರಾದರು. ಮಲಿಕ್ ಅವರು 2004ರಲ್ಲಿ ಬಿಜೆಪಿಗೆ ಸೇರಿದ್ದಾರೆ.
