ಕಲ್ಯಾಣ ಕರ್ನಾಟಕದ ಜಿಲ್ಲೆಯಗಳಲ್ಲಿ ಕಲುಷಿತ ನೀರಿನ ಪ್ರಕರಣಗಳು ಒಂದಾದ ಮೇಲೊಂದರಂತೆ ನಡೆಯುತ್ತಲೇ ಇವೆ. ಅದರಲ್ಲೂ ರಾಯಚೂರು ಜಿಲ್ಲೆಯ ಕಲುಷಿತ ನೀರಿನಿಂದ ಕನಲಿ ಹೋಗಿದೆ. ಇದೀಗ, ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಸಂಭವಿಸಿದ್ದು, ಗ್ರಾಮವೊಂದರಲ್ಲಿ ಕಲುಷಿತ ನೀರು ಕುಡಿದು ಸುಮಾರು 80 ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ.
ಜಿಲ್ಲೆಯ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗಿದ್ದು, ಆ ನೀರನ್ನು ಕುಡಿದ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಅವರೆಲ್ಲರನ್ನೂ ನಾನಾ ಆಸ್ಪತ್ರೆಗಳಿಗೆ ದಾಖಲಿಸಾಗಿದೆ.
ಗ್ರಾಮಕ್ಕೆ ನೀರು ಸರಬರಾಜು ಮಾಡುವ ಚಿತ್ತಾಪುರ ಗ್ರಾಮ ಪಂಚಾಯತಿಯ ಬೇಜವಾಬ್ದಾರಿತನದಿಂದ ದುರ್ಘಟನೆ ನಡೆಸಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಜನರು ಅಸ್ವಸ್ಥಗೊಂಡಿದ್ದರು ಪಂಚಾಯತಿ ಅಧಿಕಾರಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.