ಶಿವಮೊಗ್ಗ ಗ್ರಾಮಾಂತರದ “ಆಯನೂರಿನ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕೊಠಡಿಗಳ ನಿರ್ಮಿಸಿ ; ಪೋಷಕರು, ಎಸ್ ಡಿ ಎಂ ಸಿ, ವಿದ್ಯಾರ್ಥಿಗಳಿಂದ ಧರಣಿ ಸತ್ಯಾಗ್ರಹ” ಎಂಬ ಶೀರ್ಷಿಕೆಯಡಿಯಲ್ಲಿ ಈದಿನ ಡಾಟ್ ಕಾಮ್ ನೆನ್ನೆ ಸುದ್ದಿ ಮಾಡಿದ್ದೂ, ಸುದ್ದಿಗೆ ತಕ್ಷಣ ಸ್ಪಂದಿಸಿರುವ ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ನಾಯ್ಕ್ ಇಂದು ಶಾಲೆಗೆ ಭೇಟಿ ನೀಡಿದ್ದಾರೆ.

ಶಾಲೆಯ ಪ್ರಾರ್ಥನಾ ಚಟುವಟಿಕೆಯಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಮಿಷನ್ ಸುರಕ್ಷದ ಉದ್ದೇಶ ಮತ್ತು ಅದರ ಸದ್ಬಳಕೆಯ ಬಗ್ಗೆ ಮಾಹಿತಿ ತಿಳಿಸಿರುತ್ತಾರೆ.
ನಂತರ ಶಾಲೆಯಲ್ಲಿ ತರಗತಿ ಕೊಠಡಿಗಳ ಕೊರತೆ ಇರುವ ಬಗ್ಗೆ ಎಸ್ ಡಿಎಂ ಸಿ, ಪೋಷಕರ ಮತ್ತು ಮುಖ್ಯ ಶಿಕ್ಷಕರೊಂದಿಗೆ ಸಭೆಯನ್ನು ನಡೆಸಿ ಸಮಸ್ಯೆಯ ವಸ್ತು ಸ್ಥಿತಿಯನ್ನು ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಹೇಮಂತ್ ಎನ್ ಹಾಗೂ ಜಿಲ್ಲಾ ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಇವರ ಅವಗಾಹನೆಗೆ ಮಾಹಿತಿ ನೀಡುವ ಮೂಲಕ ಸಮಸ್ಯೆಯನ್ನು ಸರಿಪಡಿಸುವ ಬಗ್ಗೆ ಮನವರಿಕೆ ಮಾಡಿದ್ದಾಗಿ ನಮ್ಮ ಈದಿನ ಡಾಟ್ ಕಾಮ್ ಗೆ ರಮೇಶ್ ನಾಯ್ಕ್ ತಿಳಿಸಿದರು.
ಮುಂದುವರೆದು ಮಾತನಾಡಿದ ಬಿಇಒ ಅಗತ್ಯವಿರುವ ಕೊಠಡಿಯನ್ನು ನೀಡಲು ಸ್ಥಳ ಪರಿಶೀಲನೆ ಮಾಡಿ ಸ್ಥಳಕ್ಕೆ ಇಂಜಿನಿಯರ್ ಅವರನ್ನು ಕರೆಸಿ ಜಾಗದ ಅಳತೆಯನ್ನು ಮಾಡಿಸಿದ್ದಾಗಿ ತಿಳಿಸಿದ್ದಾರೆ.
ಐದರಿಂದ ಆರು ತಿಂಗಳೊಳಗೆ 3 ಕೊಠಡಿ ನೂತನವಾಗಿ ನಿರ್ಮಿಸಿ ವ್ಯವಸ್ಥೆ ಕಲ್ಪಿಸುವುದಾಗಿ ಜಿ. ಪಂ. ಸಿಇಒ ಮಾಹಿತಿ ನೀಡಿರುವುದಾಗಿ ನಮ್ಮೊಂದಿಗೆ ಮಾಹಿತಿ ಹಂಚಿಕೊಂಡರು.

ರಾಘವೇಂದ್ರ ರವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದಿರುವ ಇವರು ಈದಿನ ಡಾಟ್ ಕಾಮ್ ಮಾಧ್ಯಮ ಸಂಸ್ಥೆಯಲ್ಲಿ ಕಳೆದ 2023 ರಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆ, ರಾಜಕೀಯ ವಿಶ್ಲೇಷಣೆ,Anchoring, (ನಿರೂಪಣೆ) ವಿಶೇಷ ಸ್ಟೋರಿ ಹಾಗೂ ತನಿಖಾ ವರದಿಗಾರಿಕೆ ಮಾಡುವುದು ಇವರ ಅಚ್ಚು ಮೆಚ್ಚಿನ ಕ್ಷೇತ್ರ.