- ‘ಬಾಕಿ ಬಿಲ್ ಪಾವತಿ ವಿಳಂಬ ಆಗುತ್ತಿದೆ ಎಂದು ಗುತ್ತಿಗೆದಾರರು ಹೇಳಿದ್ದಾರೆ’
- ‘ಪರಿಶೀಲಿಸಿ ಹಣ ಬಿಡುಗಡೆ ಮಾಡುವುದಾಗಿ ಡಿಸಿಎಂ ಡಿಕೆಶಿ ಹೇಳಿದ್ದಾರೆ’
ಬಿಜೆಪಿ ನಾಯಕರು ಹತಾಶೆಯಿಂದ ಆರೋಪ ಮಾಡುತ್ತಿದ್ದಾರೆ. ಎಲ್ಲಿ ಹೋಗಿ ಧ್ವನಿ ಎತ್ತಬೇಕೋ ಅಲ್ಲಿ ಇವರು ಮಾತಾಡುತ್ತಿಲ್ಲ. ಮೊದಲು ಬಿಜೆಪಿಯವರು ವಿಪಕ್ಷ ನಾಯಕರನ್ನು ಆಯ್ಕೆ ಮಾಡಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದರು.
ಸಿಸಿಎಂ ಡಿಕೆ ಶಿವಕುಮಾರ್ ವಿರುದ್ಧ 15% ಕಮಿಷನ್ ಆರೋಪ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಗುತ್ತಿಗೆದಾರರು ಕಮಿಷನ್ ಕೇಳಿದ್ದಾರೆ ಅಂತ ಹೇಳಿಲ್ಲ. ಬಾಕಿ ಬಿಲ್ ಪಾವತಿ ವಿಳಂಬ ಆಗುತ್ತಿದೆ ಎಂದು ಹೇಳಿದ್ದಾರೆ” ಎಂದು ಸಮರ್ಥಿಸಿಕೊಂಡರು.
“ಕೆಲಸ ಆಗಿದ್ದರೆ ಹಣ ಬಿಡುಗಡೆ ಮಾಡೋದಾಗಿ ಸಿಎಂ ಹೇಳಿದ್ದಾರೆ. ಪರಿಶೀಲಿಸಿ ಹಣ ಬಿಡುಗಡೆ ಮಾಡುವುದಾಗಿ ಡಿಸಿಎಂ ಹೇಳಿದ್ದಾರೆ. ಆದರೆ, ಈ ಬಿಜೆಪಿ ನಾಯಕರು ಹತಾಶೆಯಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ಹರಿಹಾಯ್ದರು.