ಬೀದರ್ ನಗರದಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಅಬ್ಬರಿಸಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ರಸ್ತೆಗಳೆಲ್ಲವೂ ಜಲಾವೃತಗೊಂಡು ಕೆರೆಗಳಾಗಿ ಮಾರ್ಪಟ್ಟಿದ್ದವು.
ಸುಮಾರು ಎರಡೂವರೆ ಗಂಟೆಗಳ ಕಾಲ ಸುರಿದ ಬಿರುಸಿನ ಮಳೆಯಿಂದಾಗಿ ರಸ್ತೆಗಳೆಲ್ಲವೂ ಸಂಪೂರ್ಣ ಜಲಾವೃತಗೊಂಡಿದ್ದವು. ಗುಂಪಾ ರಸ್ತೆ ಹಾರೂರಗೇರಿ ಕಮಾನ್, ಹಳೆ ಜಿಲ್ಲಾಧಿಕಾರಿ ಕಚೇರಿ, ನಗರಸಭೆ ಮುಂದಿನ ಹರಳಯ್ಯ ವೃತ್ತದಲ್ಲಿ ಅಪಾರ ಪ್ರಮಾಣದಲ್ಲಿ ನೀರು ಸಂಗ್ರಹಗೊಂಡು ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಸಂಕಷ್ಟಕ್ಕೀಡಾದರು.
ಭಾನುವಾರದಿಂದ ಆರಂಭಗೊಂಡ ಮಳೆ ಸತತ ಮೂರನೇ ದಿನವೂ ಮುಂದುವರೆಯಿತು. ಮಳೆಯಿಂದ ವಾಹನ ಸವಾರರು, ಪಾದಚಾರಿಗಳು ಪರದಾಡಿದರು.
ಜಿಲ್ಲೆಯ ಔರಾದ್ ಸೇರಿದಂತೆ ನಾನಾ ಕಡೆ ಬೆಳಿಗ್ಗೆಯಿಂದಲೇ ಮೋಡ ಕವಿದು ಮಧ್ಯಾಹ್ನ ಮಳೆಯಾಯಿತು. ಗ್ರಾಮೀಣ ಭಾಗದಲ್ಲಿ ಸುರಿದ ಜಿಟಿಜಿಟಿ ಮಳೆಯಿಂದ ಕೃಷಿ ಚಟುವಟಿಕೆಗಳಿಗೆ ತೊಡಕಾಯಿತು.
ಇದನ್ನೂ ಓದಿ : ಬೀದರ್ | ಡಿಜಿಟಲ್ ಗ್ರಂಥಾಲಯದಲ್ಲಿ ಓದಿ ವಿದೇಶದಲ್ಲಿ ನೌಕರಿ : ಹಳ್ಳಿ ಹುಡುಗನ ಸಾಧನೆಗೆ ಎಲ್ಲರೂ ದಿಲ್ ಖುಷ್!