ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಬಿಸಿ ಗದಗ ಜಿಲ್ಲೆಗೂ ತಟ್ಟಿದೆ. ಬೆಳಗ್ಗೆ 6 ಗಂಟೆಯಿಂದಲೇ ಯಾವುದೇ ಬಸ್ ಗಳು ರಸ್ತೆಗೆ ಇಳಿದಿಲ್ಲ. ಇದರಿಂದ ಪ್ರಯಾಣಿಕರು ಪರದಾಡುವಂತ ಸ್ಥಿತಿ ಎದುರಾಗಿದೆ.
ಮುಷ್ಕರದ ಮಾಹಿತಿ ಇಲ್ಲದೆ ಪ್ರತಿನಿತ್ಯ ಹೊಟ್ಟೆಪಾಡಿಗಾಗಿ ಕೆಲಸಕ್ಕಾಗಿ ಅರಸಿ ಬರುವವರ ಬಸ್ಸಿಲ್ಲದ ಸಂಕಷ್ಟಕ್ಕೀಡಾದರು. ದೂರದಿಂದ ಪ್ರಯಾಣ ಬೆಳಸಿರುವ ಪ್ರಯಾಣಿಕರು ಖಾಸಗಿ ವಾಹನಗಳ ಮೊರೆ ಹೋಗುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮಂಗಳೂರು | ಸುರತ್ಕಲ್ ಎನ್‌ಐಟಿಕೆಯಲ್ಲಿ ಕೃಷ್ಣಾ ನದಿ ಜಲಾನಯನ ನಿರ್ವಹಣಾ ಅಧ್ಯಯನಗಳ ಕುರಿತು ಕಾರ್ಯಾಗಾರ
ಗದಗ ಜಿಲ್ಲೆಯಲ್ಲಿ ಕೆಎಸ್ಸಾರ್ಟಿಸಿ ಒಟ್ಟು 8 ಘಟಕಗಳಿದ್ದು, ಪ್ರತಿನಿತ್ಯ ಸುಮಾರು 560ಕ್ಕೂ ಹೆಚ್ಚು ಬಸ್ ಗಳು ಸಂಚರಿಸುತ್ತಿವೆ.