ಶಿವಮೊಗ್ಗ | ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಗೆ : ಅರ್ಜಿ ಆಹ್ವಾನ

Date:

Advertisements

ಶಿವಮೊಗ್ಗ, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಪ್ರತಿವರ್ಷದಂತೆ ಈ ವರ್ಷವೂ ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಯನ್ನು ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ವಿಶ್ವ ವಿದ್ಯಾಲಯದ ವ್ಯಾಪ್ತಿಯ ಏಳು ಜಿಲ್ಲೆಗಳಾದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ದಕ್ಷಿಣಕನ್ನಡ, ಕೊಡಗು ಜಿಲ್ಲೆಯ ಪ್ರಗತಿಪರ ರೈತ/ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಯಶಸ್ವಿ ಪ್ರಗತಿಪರ ರೈತ ಮತ್ತು ರೈತ ಮಹಿಳೆಯರು ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಅಥವಾ ಕೃಷಿ ವಿಜ್ಞಾನ ಕೇಂದ್ರಗಳು ಅಥವಾ ವಿಸ್ತರಣಾ ಶಿಕ್ಷಣ ಘಟಕಗಳಲ್ಲಿ ಅರ್ಜಿ ಅಥವಾ https://www.uahs.edu.in ರಲ್ಲಿ ಲಭ್ಯವಿರುವ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 15, 2025 ರೊಳಗಾಗಿ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ರೈತ/ ರೈತ ಮಹಿಳೆಯರಲ್ಲಿ ಪ್ರತಿ ಜಿಲ್ಲೆಯಿಂದ ಒಬ್ಬ ರೈತ ಮತ್ತು ಒಬ್ಬ ರೈತ ಮಹಿಳೆಯನ್ನು ಆಯ್ಕೆಮಾಡಿ, ಪ್ರಶಸ್ತಿ ಪುರಸ್ಕಾರ ಮಾಡಲಾಗುವುದು, ಈ ಪ್ರಶಸ್ತಿಯನ್ನು ಅಕ್ಟೋಬರ್-2025 ರಲ್ಲಿ ಜರುಗುವ ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ಪ್ರಧಾನ ಮಾಡಲಾಗುವುದು ಎಂದು ವಿಸ್ತರಣಾನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Advertisements

ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಜಂಟಿ ನಿರ್ದೇಶಕರು ಅಥವಾ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರುಗಳು, ಕೃಷಿ ವಿಜ್ಞಾನ ಕೇಂದ್ರ, ದೂ.ಸಂ.: ಶಿವಮೊಗ್ಗ- 9480838976, 8277932600, ದಾವಣಗೆರೆ-9480838209, ಚಿಕ್ಕಮಗಳೂರು- 9480838203, 8277930890, ಉಡುಪಿ-9480838202, 8277932500, ಚಿತ್ರದುರ್ಗ-9480838201, ದಕ್ಷಿಣಕನ್ನಡ- 8794706468, 8277931060, ಮಡಿಕೇರಿ- 9480838210, 7259005540 ಗಳನ್ನು ಸಂಪರ್ಕಿಸುವುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X