ಕೊರಟಗೆರೆ | ಯುವಜನತೆ ಸಾಹಿತ್ಯ ಅಧ್ಯಯನದ ಕಡೆ ಗಮನ ಕೊಡಿ : ಕಸಾಪ ಅಧ್ಯಕ್ಷ ಈರಣ್ಣ

Date:

Advertisements

ಕನ್ನಡ ಭಾಷೆ   8  ಜ್ಞಾನ ಪೀಠ ಪ್ರಶಸ್ತಿ ಪಡೆದ ಶ್ರೀಮಂತ ಭಾಷೆ.  ಸಾಹಿತ್ಯ ಬಿಟ್ಟು ಜೀವನವಿಲ್ಲ ಜೀವ‌ಬಿಟ್ಟು ಸಾಹಿತ್ಯವಿಲ್ಲ. ಹಾಗಾಗಿ ಯುವಜನತೆ ಸಾಹಿತ್ಯ ಅಧ್ಯಯನದ ಕಡೆ ಗಮನ ಕೊಡಬೇಕು ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್ ಈರಣ್ಣ ತಿಳಿಸಿದರು.

ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಂಗಳವಾರ ಆಯೋಜಿಸಿದ್ದ ಕಸಾಪ ನಡೆ ಯುವಜನತೆಯ ಕಡೆ  ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು, ಯುವ ಜನರಲ್ಲಿ ಓದುವ ಹವ್ಯಾಸವನ್ನು ರೂಢಿಸುವ ಉದ್ದೇಶದಿಂದ ಕಸಾಪ ನಡೆ ಯುವ ಜನತೆ ಕಡೆ ಕಾರ್ಯಕ್ರಮ ರೂಪಿಸಲಾಗಿದೆ.  18ವರ್ಷ ತುಂಬಿದ ಎಲ್ಲರೂ  ಕಸಾಪ ದಲ್ಲಿ ಸದಸ್ಯತ್ವ ಪಡೆಯಬಹುದಾಗಿದೆ. ಕಸಾಪದಲ್ಲಿ ಯುವಜನರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು ಎಂದರು.

 ನವೆಂಬರ್ ನಲ್ಲಿ  ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ  ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. 

Advertisements

ಉಪನ್ಯಾಸಕ ಕೆ.ಜಿ ಯತೀಶ್ ಮಾತನಾಡಿ  ಕನ್ನಡ ಅನ್ನ ನೀಡುವ ಭಾಷೆಯಾಗಿಲ್ಲ ಎಂಬುದೇ ನಮ್ಮ ದುರ್ದೈವದ ಸಂಗತಿ. ಇದಕ್ಕೆ ಚಳುವಳಿಗಳು ನಡೆಯುತ್ತಿವೆ. ನಾವು ಜಾಗೃತರಾದರೆ ಮಾತ್ರ ಈ ಭಾಷೆ ಉಳಿಯಲು ಸಾಧ್ಯ. ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅವಕಾಶ ನೀಡಬೇಕು ಎಂಬುದೇ ನಮ್ಮ ಕಸಾಪದ ಬೇಡಿಕೆಯಾಗಿದೆ ಎಂದರು.

 ಕಾರ್ಯಕ್ರಮದಲ್ಲಿ ಕಸಾಪ ಗೌರವಾಧ್ಯಕ್ಷ ಹನುಮಂತರೆಡ್ಡಿ, ಉಪಾನ್ಯಾಸಕರುಗಳಾದ ಕೆ.ಜಿ ಯತೀಶ್, ನಂಜುಂಡಪ್ಪ, ರೇಣುಕಮ್ಮ, ಜಿ.ಕೆ.ಎನ್, ಗಿರೀಶ್, ಸೇರಿದಂತೆ ನೂರಾರು ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X