ಉತ್ತರ ಕನ್ನಡ ಜಿಲ್ಲೆಯ 12 ಗ್ರಾಮ ಪಂಚಾಯಿತಿಗಳಲ್ಲಿ ಹೊಸದಾಗಿ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ಆರಂಭಿಸಲು ಆಸಕ್ತ ಫ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಾಗರಿಕರಿಗೆ ಸಮಗ್ರ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಈ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.
ಗ್ರಾಮ ಒನ್ ಕೇಂದ್ರಗಳನ್ನು ಅಂಕೋಲಾ ತಾಲೂಕಿನ ವಾಸರಕುದ್ರಿಗೆ, ಕಾರವಾರ ತಾಲೂಕಿನ ವೈಲವಾಡಾ, ಕುಮಟಾ ತಾಲೂಕಿನ ಸೊಪ್ಪಿನಹಳ್ಳಿ, ಸಿದ್ದಾಪುರ ತಾಲೂಕಿನ ನಿಲ್ಕುಂದ, ಶಿರಸಿ ತಾಲೂಕಿನ ಮಂಜುಗುಣಿ, ಶಿವಳ್ಳ, ಸೂಪಾ ತಾಲೂಕಿನ ಗಂಗೋಡ, ನಂದಿಗದ್ದೆ, ಅಣಶಿ, ಬಜಾರ್ ಕುಣಂಗ, ಶಿಂಗರಾಗಾಂವ್, ನಾಗೋಡದಲ್ಲಿ ಆರಂಭಿಸಲು ಉದ್ದೇಶಿಸಲಾಗಿರುವ ಗ್ರಾಮಗಳು ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಆಸಕ್ತರು ಆಗಸ್ಟ್ 15, 2025ರೊಳಗೆ https://www.karnatakaone.gov.in/Public/GramOneFranchiseeTerms ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನು ಓದಿದ್ದೀರಾ? ಮೆಟ್ರೋ ಯೋಜನೆಯಲ್ಲಿ ಕೇಂದ್ರದ ಜೊತೆಗೆ ರಾಜ್ಯ ಸರ್ಕಾರದ ಪಾಲೂ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತಹಸೀಲ್ದಾರ್ ಕಚೇರಿಯನ್ನು ಸಂಪರ್ಕಿಸಬಹುದೆಂದು ಅಪರ ಜಿಲ್ಲಾಧಿಕಾರಿ ಮತ್ತು ಗ್ರಾಮ ಒನ್ ಯೋಜನೆಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
