ಜಾತಿ ಗಣತಿ | ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಎಂದು ಬರೆಸಲು ತೀರ್ಮಾನ: ಸಾಣೇಹಳ್ಳಿ ಸ್ವಾಮೀಜಿ

Date:

Advertisements

ದಾವಣಗೆರೆಯಲ್ಲಿ ಮಂಗಳವಾರ ನಡೆದ ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಧರ್ಮ ಮತ್ತು ಜಾತಿ ವಿಚಾರವಾಗಿ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, “ಮುಂಬರುವ ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಮತ್ತು ಜಾತಿಯ ಕಾಲಂನಲ್ಲಿ ‘ಉಪಪಂಗಡ’ ದಾಖಲಿಸುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ತೀರ್ಮಾನ ಕೈಗೊಂಡಿದೆ” ಎಂದು ತಿಳಿಸಿದರು.

“ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತವೆಂದು ನಮೂದಿಸುವ ಅವಕಾಶವನ್ನು ಕೇಂದ್ರ ಸರ್ಕಾರ ಕಲ್ಪಿಸುತ್ತಿಲ್ಲ ಎಂಬ ಸುಳಿವು ಸಿಕ್ಕಿದೆ. ಧರ್ಮದ ಕಾಲಂನಲ್ಲಿ ಲಿಂಗಾಯತ ನಮೂದಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಅಗತ್ಯವಿದೆ. ಇದಕ್ಕೆ ಸರ್ಕಾರ ಸ್ಪಂದಿಸುವ ವಿಶ್ವಾಸವೂ ಇದೆ” ಎಂದರು.

Advertisements

“ಲಿಂಗಾಯತ ಸಮುದಾಯದ ಹಲವು ಒಳಪಂಗಡಗಳು ಸರ್ಕಾರದ ಸೌಲಭ್ಯ ಪಡೆಯುತ್ತಿವೆ. ಜಾತಿ ಗಣತಿಯಲ್ಲಿ ಒಳಪಂಗಡ ನಮೂದಿಸದೇ ಇದ್ದರೆ ಈ ಸೌಲಭ್ಯ ಕೈತಪ್ಪುವ ಅಪಾಯವಿದೆ. ಹೀಗಾಗಿ, ಒಕ್ಕೂಟ ಈ ತೀರ್ಮಾನ ಕೈಗೊಂಡಿದೆ” ಎಂದು ಹೇಳಿದರು.

“ಜಾತಿ ಗಣತಿಯಲ್ಲಿ ಹೀಗೆ ಬರೆಸಬೇಕು ಎಂಬ ಒತ್ತಡವನ್ನು ಜನರ ಮೇಲೆ ಹೇರುವುದಿಲ್ಲ. ಪಂಚಪೀಠಾಧೀಶರು ಸಿದ್ಧರಿದ್ದರೆ ಚರ್ಚಿಸಿ ಒಗ್ಗೂಡಿ ತೀರ್ಮಾನ ಕೈಗೊಳ್ಳಲು ಮುಕ್ತರಾಗಿದ್ದೇವೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅ.5ರಂದು ನಡೆಯುವ ಬಸವತತ್ವ ಅಭಿಯಾನದ ಸಮಾರೋಪ ಸಮಾರಂಭಕ್ಕೆ ಪಂಚಪೀಠಾಧೀಶರು ಬರುವುದಾದರೆ ಸ್ವಾಗತ ಕೋರಲು ಸಿದ್ಧರಿದ್ದೇವೆ” ಎಂದು ತಿಳಿಸಿದರು.

“ಗುರು-ವಿರಕ್ತ ಭಾವನೆಯೇ ಲಿಂಗಾಯತ ಧರ್ಮದಲ್ಲಿ ಇಲ್ಲ. ಪಂಚಪೀಠಾಧೀಶರು ಜಾತಿ ಗಣತಿ ಕುರಿತು ವ್ಯಕ್ತಪಡಿಸಿದ ಅಭಿಪ್ರಾಯಕ್ಕೆ ವಿರೋಧವಿಲ್ಲ. ಹಾಗಂತ ಅವರು ಹೇಳಿದ ಎಲ್ಲವನ್ನೂ ನಾವು ಒಪ್ಪುವುದಿಲ್ಲ. ಬಸವ ತತ್ವ ಪುರಾಣ ಪರಂಪರೆ ಅಲ್ಲ. ಅವರಲ್ಲಿಯೂ ವೈಜ್ಞಾನಿಕ, ವೈಚಾರಿಕ ಮನೋಭಾವ ಬೆಳೆಯುತ್ತಿರುವುದನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ್ದೇವೆ” ಎಂದು ಹೇಳಿದರು.

ಪಾಂಡೋಮಟ್ಟಿ ವಿರಕ್ತ ಮಠದ ಗುರುಬಸವ ಸ್ವಾಮೀಜಿ, ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ, ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಅಥಣಿ ವೀರಣ್ಣ, ಅಣಬೇರು ರಾಜಣ್ಣ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X