ಮಂಗಳೂರು | ಹಕ್ಕು ಪ್ರಾಪ್ತಿಗೆ ಹೋರಾಟ ಅನಿವಾರ್ಯ: ಬಿ.ಎಂ ಭಟ್

Date:

Advertisements

ದೇಶದಲ್ಲಿ ಐದು ಕೋಟಿಗೂ ಹೆಚ್ಚು ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಬೀದಿ ವ್ಯಾಪಾರಿಗಳು ಅತ್ಯಂತ ಶ್ರಮ ಜೀವಿಗಳು ಅವರ ಬೇಡಿಕೆಗಳು ನ್ಯಾಯತವಾಗಿದ್ದು ಹಕ್ಕುಪ್ರಾಪ್ತಿಗೆ ಹೋರಾಟಕ್ಕೆ ಇಳಿಯುವುದು ಅನಿವಾರ್ಯ ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಿ.ಎಂ ಭಟ್ ತಿಳಿಸಿದರು.

ಅವರು ಮಂಗಳವಾರ ನಗರದ ನಾಸಿಕ್ ಬಂಗೇರ ಸಭಾಭವನದಲ್ಲಿ ನಡೆದ ಬೀದಿಬದಿ ವ್ಯಾಪಾರಸ್ಥರ ಜಿಲ್ಲಾ ಸಮಾವೇಶ ಉದ್ಘಾಟಿಸಿ ಮಾತನಾಡಿ, ಬೀದಿ ವ್ಯಾಪಾರಿಗಳ ಬದುಕುವ ಹಕ್ಕನ್ನು ಕಸಿಯಲು ಯಾರಿಗೂ ಸಾಧ್ಯವಿಲ್ಲ.  ಸಂಘಟನೆ ಮತ್ತು ಹೋರಾಟದಿಂದ ಬಲಿಷ್ಠ ಚಳುವಳಿ ಕಟ್ಟಬೇಕೆಂದು ಸಲಹೆ ನೀಡಿದರು.

ಇದನ್ನೂ ಓದಿ: ಬೆಳ್ತಂಗಡಿ | ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ ಎಸ್‌ಐಟಿಗೆ ಹಸ್ತಾಂತರಕ್ಕೆ ಆದೇಶ

Advertisements

ಸಮಾವೇಶ ಉದ್ದೇಶಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ದೇಶದಲ್ಲಿ ಬೀದಿಬದಿ ವ್ಯಾಪಾರಿಗಳ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾಯಿದೆ ಜಾರಿಗೆ ಬಂದು ದಶಕಗಳು ಕಳೆದರೂ ಕೂಡ ಸರ್ಕಾರಗಳು ಕಾನೂನಿನ ಸಮಗ್ರ ಅನುಷ್ಠಾನ ಮಾಡಲು ವಿಫಲವಾಗಿದೆ. ಪಿಎಂ ಸ್ವನಿಧಿ ಸಾಲ ಯೋಜನೆಯನ್ನು ಸ್ಥಗಿತಗೊಳಿಸಿದ್ದು, ಇದರಿಂದ ಬೀದಿ ವ್ಯಾಪಾರಿಗಳ ಸ್ವಾವಲಂಬನೆಯ ಬದುಕಿಗೆ ಧಕ್ಕೆ ಆಗಿದೆ ಎಂದು ಅವರು ಟೀಕಿಸಿದರು.

ಇದನ್ನೂ ಓದಿ: ಮಂಗಳೂರು | ಪತ್ರಕರ್ತರಿಗೆ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಫಲಿತಾಂಶ ಪ್ರಕಟ

ಈ ವೇಳೆ ಸಂಘದ ಗೌರವಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಮಾತನಾಡಿ, ಬೀದಿ ಬದಿ ವ್ಯಾಪಾರಿಗಳ ಮೇಲೆ ದೌರ್ಜನ್ಯ ತಡೆಗಟ್ಟಲು ಸರ್ಕಾರ ಕ್ರಮ ಕೈಗೊಳ್ಳಬೇಕು ಮತ್ತು ಜಿಲ್ಲೆಯ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಬೀದಿ ವ್ಯಾಪಾರಿಗಳ ಸಮಗ್ರ ಕಾನೂನು ಜಾರಿಗೊಳಿಸಲು ಪ್ರಾಮಾಣಿಕ ಹೋರಾಟದ ಅಗತ್ಯತೆಯನ್ನು ಎಂದು ಹೇಳಿದರು.

ಸಂಘದ ಅಧ್ಯಕ್ಷರಾದ ಮುಜಾಫರ್ ಅಹ್ಮದ್ ಅಧ್ಯಕ್ಷತೆ ವಹಿಸಿದ್ದರು ಪ್ರಧಾನ ಕಾರ್ಯದರ್ಶಿ ಸಂತೋಷ್ ಆರ್ ಎಸ್ ಸ್ವಾಗತಿಸಿದರೆ, ಉಪಾಧ್ಯಕ್ಷ ವಿಜಯ ಜೈನ್ ವಂದಿಸಿದರು.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ಸೋಮವಾರ ಮೂರು ಕಳೇಬರ ಸಿಕ್ಕಿದೆ: ಸುಜಾತ ಭಟ್ ಪರ ವಕೀಲ ಮಂಜುನಾಥ್

ಮುಖಂಡರಾದ ಹಸನ್ ಕುದ್ರೋಳಿ,ಹಂಝ, ವಿನಾಯಕ ಶೆಣೈ ತಲಪಾಡಿ, ಕಲಂದರ್ ಕೋಟೆಕಾರ್,ಸಿಖಂದರ್ ಬೇಗ್, ಚೆರಿಯೋನು ಸುರತ್ಕಲ್, ಮನ್ಸೂರ್ ಸೆಂಟ್ರಲ್ ಮಾರ್ಕೆಟ್, ಶಿವಾನಂದ,ಗಂಗಮ್ಮ,ಮುಸ್ತಫಾ ಸೆಲ್ವರಾಜ್, ಚಂದ್ರಹಾಸ್ ಪಡೀಲ್ ಉಮೇಶ್, ಗದಿಗಪ್ಪ,ಸಿಕಂದರ್ ಬೇಗ್,ವಿಜಯ ಜೈನ್,ಕಾಜ ಮೋಹಿಯುದ್ದಿನ್,ಎಂ ಎನ್ ಶಿವಪ್ಪ,ಚಂದ್ರಶೇಖರ ಭಟ್,ಮೇಬಲ್ ಡಿಸೋಜ,  ಶಾಲಿನಿ ಬೋಂದೆಲ್, ಅಬ್ದುಲ್ ಖಾದರ್ ಫಿಲೋಮೀನ,ಗುಡ್ಡಪ್ಪ, ರಫೀಕ್,ಸಲಾಂ ಸುರತ್ಕಲ್, ಎಂ.ಎಸ್ ಮೊಯಿದಿನ್ ಬೈಕಂಪಾಡಿ,ಮುತ್ತುರಾಜ್, ಖಾದರ್ ವಾಮಂಜೂರ್,ರಿಯಾಜ್ ಮದಕ, ರಫೀಕ್ ಪಾಂಡೇಶ್ವರ, ನೌಷಾದ್ ಕಣ್ಣೂರು, ಅಸ್ಲಮ್ ಕಾಟಿಪಳ್ಳ, ಧನಂಜಯ ಸುರತ್ಕಲ್, ಖಲೀಲ್ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X