ಶಿವಮೊಗ್ಗ, ಚೆನ್ನಬಸಪ್ಪ ಓರ್ವ ಲಾಟರಿ ಶಾಸಕರಾಗಿದ್ದು, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಬಗ್ಗೆ ಮಾತನಾಡಲು ಯಾವುದೇ ಯೋಗ್ಯತೆ ಇಲ್ಲ ಎಂದು ಯುವ ಕಾಂಗ್ರೆಸ್ ಮುಖಂಡ ಮಂಜು ಪುರಲೆ ಹೇಳಿದ್ದಾರೆ.
ಶಿವಮೊಗ್ಗ ನಗರದಲ್ಲಿ ಅಶಾಂತಿ ಸೃಷ್ಟಿಸಿರುವುದು, ಕೋಮುಗಲಭೆ ಎಬ್ಬಿಸಿರುವುದೇ ಶಾಸಕ ಚೆನ್ನಬಸಪ್ಪ ಅವರ ಇದುವರೆಗಿನ ಸಾಧನೆ. ಶಾಸಕರಾಗಿ ಈವರೆಗೆ ಹೇಳಿಕೊಳ್ಳುವಂತಹ ಒಂದೇ ಒಂದು ಅಭಿವೃದ್ಧಿ ಕಾರ್ಯ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಇಂತಹ ವ್ಯಕ್ತಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರನ್ನು ಹುಚ್ಚರ ನಾಯಕ ಎಂದು ಕರೆದಿರುವುದು ಖಂಡನಾರ್ಹ ಎಂದು ಮಂಜು ಪುರಲೆ ಅವರು ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಸಂತೋಷ್ ಲಾಡ್ ಕಾರ್ಮಿಕರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ವ್ಯಕ್ತಿಯ ಕಾರ್ಯವೈಖರಿಯನ್ನು ಸಹಿಸಲಾಗದೆ ಅವರ ಬಗ್ಗೆ ಮಾತನಾಡುವುದು ಶಾಸಕರಿಗೆ ಶೋಭೆ ತರುವುದಿಲ್ಲ. ಚನ್ನಬಸಪ್ಪನವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಹಾಗೂ ಬಿಜೆಪಿ ನಾಯಕರನ್ನು ತಮ್ಮತ್ತ ಸೆಳೆಯುವುದಕ್ಕಾಗಿ ಇಂತಹ ಹುಚ್ಚು ಹೇಳಿಕೆಗಳನ್ನು ಕೊಡುವುದನ್ನು ಮೊದಲು ನಿಲ್ಲಿಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಚನ್ನಬಸಪ್ಪ ಈವರೆಗೆ ಹೇಳಿಕೊಳ್ಳುವ ಒಂದೇ ಒಂದು ಒಳ್ಳೆಯ ಕೆಲಸವನ್ನು ಮಾಡಿಲ್ಲ. ಶಿವಮೊಗ್ಗ ಜನ ಈಗಾಗಲೇ ಅವರನ್ನು ತಿರಸ್ಕರಿಸಿದ್ದಾರೆ. ಇದೀಗ ನಮ್ಮ ಕಾಂಗ್ರೆಸ್ ನಾಯಕರನ್ನು ಬೈದರೆ ಬಿಜೆಪಿ ಪಕ್ಷ ತಮಗೆ ಮತ್ತೊಮ್ಮೆ ಟಿಕೆಟ್ ನೀಡುತ್ತದೆ ಎಂದು ಹಗಲು ಕನಸು ಕಾಣುತ್ತಿದ್ದಾರೆ ಎಂದು ಮಂಜು ಪುರಲೆ ಕಿಡಿ ಕಾರಿದ್ದಾರೆ.
ರಾಜ್ಯದ ಜನ ಯಾರು ಹುಚ್ಚರು ಎಂದು ಈಗಾಗಲೇ ತೀರ್ಮಾನಿಸಿದ್ದಾರೆ. ಹಾಗಾಗಿಯೇ ಬಿಜೆಪಿಯವರನ್ನು ಅಧಿಕಾರದಿಂದ ಕಿತ್ತೊಗೆದಿದ್ದಾರೆ. ಶಾಸಕರು ಇದನ್ನು ಮೊದಲು ತಿಳಿಯಬೇಕು. ತಮ್ಮ ಸ್ಥಾನದ ಅರಿವು ಇಲ್ಲದೇ ಬಾಯಿಗೆ ಬಂದಂತೆ ಮಾತನಾಡಿದರೇ ಕಾಂಗ್ರೆಸ್ ಕಾರ್ಯಕರ್ಯರು ಬುದ್ದಿ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.