ಶಿವಮೊಗ್ಗ | ಅಡಿಷನಲ್ ಎಸ್ಪಿ ಎ.ಜಿ.ಕಾರ್ಯಪ್ಪ ನೇತೃತ್ವದಲ್ಲಿ ಲಾಡ್ಜ್, ಕಲ್ಯಾಣ ಮಂಟಪ ಮಾಲೀಕರುಗಳ ಸಭೆ

Date:

Advertisements

ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಮುಂಬರುವ ಗೌರಿ ಹಾಗೂ ಗಣೇಶ ಹಬ್ಬ ಮತ್ತು ಈದ್ ಮಿಲಾದ್, ಹಬ್ಬಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ಲಾಡ್ಜ್, ಕಲ್ಯಾಣ ಮಂಟಪಗಳ ಮಾಲೀಕರುಗಳ ಸಭೆ ನಡೆದಿದೆ.

ಅಡಿಷನಲ್ ಎಸ್ಪಿ ಎ.ಜಿ. ಕಾರ್ಯಪ್ಪರವರು ಸಭೆಯ ನೇತೃತ್ವವನ್ನು ವಹಿಸಿದ್ದು, ಸಭೆಯಲ್ಲಿ ಕೆಲವು ತೀರ್ಮಾನ ತೆಗೆದುಕೊಳ್ಳಲಾಗಿದೆ.‌

ಲಾಡ್ಜ್ ಹಾಗೂ ಕಲ್ಯಾಣ ಮಂಟಪಗಳಲ್ಲಿ ಕಡ್ಡಾಯವಾಗಿ ಸಿ. ಸಿ. ಕ್ಯಾಮೆರಾಗಳನ್ನ ಅಳವಡಿಸ ಬೇಕು.ಎಂಟ್ರಿ ಮತ್ತು ಎಕ್ಸಿಟ್ ಗೇಟ್ ಬೇರೆ ಬೇರೆ ಇರದೇ ಒಂದೇ ಗೇಟ್ ಇರಬೇಕು.ತಂಗುವ ಗ್ರಾಹಕರ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಪಡೆದಿರಬೇಕು. ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ತಿಳಿಸಬೇಕು. ಯಾವುದೇ ತುರ್ತು ಸಂದರ್ಭಗಳಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಿ ಸಹಾಯ ಪಡೆಯಬಹುದಾಗಿರುತ್ತದೆ.

Advertisements
1002016815

ಕಡ್ಡಾಯವಾಗಿ ಎಲ್ಲಾ ಅಗತ್ಯವಾದ ದಾಖಲೆಗಳನ್ನು ನಿರ್ವಹಣೆ ಮಾಡಬೇಕು.ಸಿಸಿಟಿವಿ ಕ್ಯಾಮೆರಾ ಗಳ ಸಂಗ್ರಹಣೆಯು ಕನಿಷ್ಠಪಕ್ಷ ಒಂದು ತಿಂಗಳ ಅವಧಿಗೆ ಇರುವ ಹಾಗೆ ನಿರ್ವಹಿಸಬೇಕು. ಉತ್ತಮ ರೀತಿಯ ಸ್ವಚ್ಛತೆಯನ್ನು ಕಾಪಾಡುವ ವ್ಯವಸ್ಥೆಯನ್ನು ಹೊಂದಿರಬೇಕು. ಗ್ರಾಹಕರುಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪ್ರತಿವಾರ ವ್ಯಾಪ್ತಿಯ ಪೊಲೀಸ್ ಠಾಣೆಗೆ ಒದಗಿಸಬೇಕು.ನೀರಿನ ಟ್ಯಾಂಕ್ ಅನ್ನು ಪ್ರತಿದಿನ ಪರಿಶೀಲಿಸಬೇಕು ಹಾಗೂ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು.

ಹೊರ ರಾಜ್ಯದ ಗ್ರಾಹಕರಗಳು ತಂಗಲು ಬಂದಲ್ಲಿ ಕಡ್ಡಾಯವಾಗಿ ಅವರುಗಳ ಸಮರ್ಪಕ ದಾಖಲೆಗಳನ್ನು ಪಡೆದು ಜೆರಾಕ್ಸ್ ಕಾಪಿಯನ್ನು ನಿರ್ವಹಿಸಬೇಕು. ಹಬ್ಬದ ಸಮಯದಲ್ಲಿ ಪೊಲೀಸ್ ಇಲಾಖೆಯೊಂದಿಗೆ ಎಲ್ಲ ರೀತಿಯ ಸಹಕಾರದಿಂದ ಇರಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಬಾಬು ಆಂಜನಪ್ಪ ಹಾಗೂ ಸಂಜೀವ್ ಕುಮಾರ್, ಶಿವಮೊಗ್ಗ ನಗರದ ಎಲ್ಲಾ ಪೊಲೀಸ್ ನಿರೀಕ್ಷಕರು ಪೊಲೀಸ್ ಉಪನಿರೀಕ್ಷಕರು ಹಾಗೂ ಶಿವಮೊಗ್ಗ ನಗರದ ಲಾಡ್ಜ್ ಹಾಗೂ ಕಲ್ಯಾಣ ಮಂಟಪಗಳ ಮಾಲೀಕರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X