ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ (ಯಾದವ) ಸಂಘ ಶಿವಮೊಗ್ಗ ಇವರ ಸಂಯುಕ್ತಶ್ರಾಯದಲ್ಲಿ ಆಗಸ್ಟ್ 16 ರ ಬೆಳಿಗ್ಗೆ 11.00 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಕೃಷ್ಣ ಜಯಂತಿಯನ್ನು ಆಯೋಜಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು.
ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ಆಗಮಿಸುವರು. ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎಸ್. ಚನ್ನಬಸಪ್ಪ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಗೊಲ್ಲರ(ಯಾದವ)ಸಂಘದ ಅಧ್ಯಕ್ಷರು, ತಾಲ್ಲೂಕು ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ. ಸಿಇಓ, ಅಧಿಕಾರಿ ವರ್ಗದವರು ಹಾಗೂ ಸಿಬ್ಬಂದಿಗಳು ಮತ್ತು ವಿವಿಧ ಸಂಘಟನೆಯ ಮುಖಂಡರು ಪದಾಧಿಕಾರಿಗಳು ಭಾಗವಹಿಸುವರು.
ದಾವಣಗೆರೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ. ಜಿ.ಕೆ. ಪ್ರೇಮ ಇವರು ವಿಶೇಷ ಉಪನ್ಯಾಸವನ್ನು ನೀಡುವರು.