ಉಡುಪಿ | 4 ಲಕ್ಷ ಮೌಲ್ಯದ ಶ್ರೀಗಂಧದ ಮರ ಕಳ್ಳತನ, ಆರೋಪಿಗಳ ಬಂಧನ

Date:

Advertisements

ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ಎಂಬವರ ತೋಟದಲ್ಲಿ ಬೆಳೆಸಿದ್ದ 4 ಲಕ್ಷ ಮೌಲ್ಯದ ಒಟ್ಟು 9 ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 84/2025, ಕಲಂ: 329(3), 303(2) ಭಾರತೀಯ ನ್ಯಾಯ ಸಂಹಿತೆ 2023 ಕಲಂ 86,87 ಕರ್ನಾಟಕ ಅರಣ್ಯ ಕಾಯ್ದೆ1963ರಂತೆ ದಾಖಲಾದ ಪ್ರಕರಣದಲ್ಲಿ ತನಿಖೆಯನ್ನು ಕೈಗೆತ್ತಿಕೊಂಡ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಕಾನೂನು ಸುವ್ಯವಸ್ತೆ ಮತ್ತು ಸಂಚಾರ ವಿಭಾಗದ ಪಿ.ಎಸ್.ಐ. ಪ್ರಸನ್ನ ಎಮ್,ಎಸ್ ಮತ್ತು ತನಿಖಾ ವಿಭಾಗದ ಪಿ.ಎಸ್.ಐ. ಸುಂದರ ರವರ ತಂಡವು, ಆರೋಪಿಗಳಾದ ಗಣೇಶ್, ಸಂತೋಷ, ಮೊಯ್ದೀನ್ ಎಂಬುವವರನ್ನು ಬಂಧಿಸುವಲ್ಲಿ ಯಶಸ್ಸಾಗಿದ್ದಾರೆ.

ಬಂಧಿತರಿಂದ ಕಳುವಾದ ಶ್ರೀ ಗಂಧದ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣದ ವಿಚಾರಣಾ ಸಮಯ ಆರೋಪಿಗಳು ಶಿರ್ವಾ ಠಾಣಾ ವ್ಯಾಪ್ತಿಯಲ್ಲಿ ಕೂಡಾ ಶ್ರೀ ಗಂಧದ ಮರಗಳನ್ನು ಕಳವು ಮಾಡಿರುವ ಬಗ್ಗೆ ಒಪ್ಪಿಕೊಂಡಿರುತ್ತಾರೆ. ಪ್ರಕರಣದ ಆರೋಪಿತರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಹರಿರಾಮ್ ಶಂಕರ್ ರವರ ಆದೇಶದಂತೆ ಕಾರ್ಕಳ ಉಪವಿಭಾಗ ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾ. ಹರ್ಷ ಪ್ರೀಯಂವದ ಐ.ಪಿ.ಎಸ್ ರವರ ನಿರ್ದೇಶನದಲ್ಲಿ ಕಾರ್ಕಳ ವೃತ್ತ ನಿರೀಕ್ಷಕರಾದ ಮಂಜಪ್ಪ ಡಿ,ಆರ್ ರವರ ಮಾರ್ಗದರ್ಶನದಲ್ಲಿ, ಕಾರ್ಕಳ ಗ್ರಾಮಾಂತರ ಠಾಣಾ ಪಿಎಸ್‌ಐಗಳಾದ ಪ್ರಸನ್ನ ಎಮ್,ಎಸ್, ಸುಂದರ ಮತ್ತು ಸಿಬ್ಬಂದಿಯವರಾದ ಎ.ಎಸ್.ಐ ಪ್ರಕಾಶ್, ಎ.ಎಸ್.ಐ ಸುಂದರ ಗೌಡ, ಸಿಬ್ಬಂದಿಯವರಾದ ರುದ್ರೇಶ್, ಚಂದ್ರಶೇಖರ, ಶ್ರೀಮತಿ ಸುಮಿತ್ರ, ಮಹಾಂತೇಶ್, ಸೋಮಶೇಖರ ಎಸ್,ಜಿ, ರವೀಂದ್ರ, ಆನಂದ, ಶ್ರೀಮತಿ ಶಶಿಕಲಾರವರು ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X