ಮದುವೆಯಾಗುವುದಾಗಿ ನಂಬಿಸಿ 16 ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿದ ಹಾಗೂ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಇಟ್ಟಿಗಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಹೂವಿನಹಡಗಲಿ ತಾಲ್ಲೂಕಿನ ಇಟ್ಟಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಒಂದನೇ ಆರೋಪಿ ಅತ್ಯಾಚಾರ ನಡೆಸಿದ್ದ. ಇದರ ವಿಡಿಯೊ ರೆಕಾರ್ಡ್ ಇದೆ ಎಂದು ಹೆದರಿಸಿ ಆರೋಪಿ ಪದೇ ಪದೇ ದೌರ್ಜನ್ಯ ಎಸಗಿದ್ದಾನೆ.
ಇದನ್ನೂ ಓದಿ : ಕಲಬುರಗಿ | ಮದ್ಯ ಸೇವನೆ ಚಟ ಬಿಡಿಸಲು ನಾಟಿ ವೈದ್ಯ ನೀಡಿದ ಔಷಧ ಸೇವನೆ : ಮೂವರ ಸಾವು
ಎರಡನೇ ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಇಬ್ಬರು ಆರೋಪಿಗಳ ವಿರುದ್ಧ ಇಟ್ಟಿಗಿ ಠಾಣೆಯಲ್ಲಿ ಮಂಗಳವಾರ ಪೋಕ್ಸೊ ಪ್ರಕರಣ ದಾಖಲಾಗಿದೆ.