ಚಿಟಗುಪ್ಪಾ ತಾಲ್ಲೂಕಿನ ಮುನ್ನಾಏಖೇಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ನಾಯಿ ದಾಳಿಯಿಂದ ತೀವ್ರ ಗಾಯಗೊಂಡು ಬ್ರಿಮ್ಸ್‌ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ರೇಬೀಸ್‍ಗೆ ನೀಡಲಾಗುವ ರೇಬೋಪೋರ್ ಹಾಗೂ ಇಮ್ಯುನೋಗ್ಲೊಬಿನ್ ಇಂಜೆಕ್ಷನ್‍ಗಳ ಕೊರತೆಯಾಗದಂತೆ ಕನಿಷ್ಠ 100 ವೈಲ್ಸ್‌ಗಳನ್ನು ಇಡಬೇಕು. ಗಾಯಾಳುಗಳನ್ನು ಉತ್ತಮ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದರು.
ʼತುರ್ತು ಪರಿಸ್ಥಿತಿಯಲ್ಲಿ ಎಲ್ಲ ಅಗತ್ಯ ಔಷಧಿಗಳು ಲಭ್ಯವಾಗಬೇಕು. ಔಷಧಿಗಳನ್ನು ಹೊರಗಡೆ ತರುವಂತೆ ಸೂಚಿಸಬಾರದುʼ ಎಂದು ಜಿಲ್ಲಾಧಿಕಾರಿಗಳು ಬ್ರಿಮ್ಸ್ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಚರಣ ರೆಡ್ಡಿ ಎಂಬ ಬಾಲಕ ಗಂಭೀರ ಗಾಯಗೊಂಡಿದ್ದು, ಅವರನ್ನು ತುರ್ತು ಚಿಕಿತ್ಸೆ ನೀಡಲಾಗಿದ್ದು, ದಾಖಲಿಸಿಕೊಳ್ಳಲಾಗಿದೆ. ಇಬ್ಬರು ಬಾಲಕಿಯರಾದ ಶಮಿತಾ ಹಾಗೂ ಈಶ್ವರಿ ಅವರು ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಎಂದು ಬ್ರಿಮ್ಸ್ ನಿರ್ದೇಶಕ ಡಾ. ಶಿವಕುಮಾರ್ ಶೆಟಕಾರ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಬೀದರ್ | ಡಿಜಿಟಲ್ ಗ್ರಂಥಾಲಯದಲ್ಲಿ ಓದಿ ವಿದೇಶದಲ್ಲಿ ನೌಕರಿ : ಹಳ್ಳಿ ಹುಡುಗನ ಸಾಧನೆಗೆ ಎಲ್ಲರೂ ದಿಲ್ ಖುಷ್!