ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಯೊಬ್ಬ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ ಒಂದು ವಾರದಲ್ಲಿ ಕೋಟಾದಲ್ಲಿ ನಡೆದ ಮೂರನೇ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ಇದಾಗಿದೆ.
ಮೃತರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಅಜಂಗಢ ನಿವಾಸಿಯಾಗಿರುವ 17 ವರ್ಷದ ಮನೀಶ್ ಪ್ರಜಾಪತ್ ಕಳೆದ ಆರು ತಿಂಗಳಿನಿಂದ ಕೋಟಾದ ಖಾಸಗಿ ಕೋಚಿಂಗ್ ಸಂಸ್ಥೆಯಲ್ಲಿ ಜಂಟಿ ಪ್ರವೇಶ ಪರೀಕ್ಷೆಗೆ (ಜೆಇಇ) ತಯಾರಿ ನಡೆಸುತ್ತಿದ್ದರು.
ಈ ಸುದ್ದಿ ಓದಿದ್ದೀರಾ? ಒಂದೂವರೆ ಗಂಟೆಯಾದರೂ ಮಣಿಪುರದ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ನರೇಂದ್ರ ಮೋದಿ
ಘಟನಾ ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಸದ್ಯ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಈ ವರ್ಷ ಕೋಟಾದಲ್ಲಿ 21 ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ ಕೋಟಾದಲ್ಲಿ ಕೋಚಿಂಗ್ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಕನಿಷ್ಠ 15 ಪ್ರಕರಣಗಳು ದಾಖಲಾಗಿದ್ದವು.
ಈ ಘಟನೆಯು ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಯ ಗೊಂದಲದ ಪ್ರವೃತ್ತಿಯನ್ನು ಮತ್ತೊಮ್ಮೆ ಕೇಂದ್ರೀಕರಿಸಿದ್ದು, ಪ್ರತಿ ವರ್ಷ, ದೇಶದ ಉನ್ನತ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ದೇಶದಾದ್ಯಂತದ ಲಕ್ಷಾಂತರ ವಿದ್ಯಾರ್ಥಿಗಳು ಪ್ರಮುಖ ಶಿಕ್ಷಣ ಕೇಂದ್ರಕ್ಕೆ ಸೇರುತ್ತಿದ್ದಾರೆ.
ಕೋಟಾದಲ್ಲಿನ ಕೋಚಿಂಗ್ ಸೆಂಟರ್ ಮತ್ತು ಹಾಸ್ಟೆಲ್ ವ್ಯವಸ್ಥೆಯ ಬಗ್ಗೆ ಕಿಡಿಕಾರಿರುವ ಸ್ಥಳೀಯರು ಹಾಗೂ ವಿದ್ಯಾರ್ಥಿಗಳ ಪೋಷಕರು ‘ನಗರದಲ್ಲಿ ಮಕ್ಕಳು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂಬುದನ್ನು ಇಲ್ಲಿನ ಆಡಳಿತ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.