ಮೈಸೂರು | ಆಗಸ್ಟ್. 12 ರಿಂದ 14 ರ ವರೆಗೆ ರಾಜ್ಯವ್ಯಾಪಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

Date:

Advertisements

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಇದೇ ಆಗಸ್ಟ್. 12 ರಿಂದ 14 ರ ವರೆಗೆ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನಾ ಧರಣಿಯನ್ನು ರಾಜ್ಯವ್ಯಾಪಿ ನಡೆಸುತಿದ್ದು, ಇದರ ಭಾಗವಾಗಿ ಮೈಸೂರಿನ ಗಾಂಧಿ ವೃತ್ತದಲ್ಲಿ ಅಹೋರಾತ್ರಿ ಧರಣಿ ಕೂರಲಿದ್ದೇವೆ, ಕೊಟ್ಟ ಮಾತು ತಪ್ಪಿದ ಸರ್ಕಾರಕ್ಕೆ ಪ್ರತಿರೋದದ ಬಿಸಿ ಮುಟ್ಟಿಸಲಿದ್ದೇವೆ ಎಂದರು.

ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಆರೋಗ್ಯದ ಆಶಾಕಿರಣ. ಆರೋಗ್ಯ ಸೇವೆಗಳನ್ನು ಪಡೆಯಲು ಕಷ್ಟಪಡುವ ಗ್ರಾಮೀಣ ಜನತೆಯ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಯಾವುದೇ ಆರೋಗ್ಯ ಸಂಬಂಧಿತ ಬೇಡಿಕೆಗಳಿಗೆ ಆಶಾ ಮೊದಲ ಕರೆ ಕೇಂದ್ರವಾಗಿದೆ. ಜನತೆಯ ಮತ್ತು ಸರ್ಕಾರದ ನಿರೀಕ್ಷೆಯಂತೆ ಆಶಾ ತನ್ನ ಸೇವೆಯಿಂದ ಕಟ್ಟಕಡೆಯ ಜನರನ್ನೂ ಆರೋಗ್ಯವಂತರನ್ನಾಗಿಡಲು ಹಗಲು, ರಾತ್ರಿ ಶ್ರಮಿಸುತ್ತಿರುವರು. ಇವರ ಸೇವೆಗೆ ಸಮುದಾಯದಿಂದ ಸಿಗುವ ಗೌರವಾದರಗಳು ಸಂತಸ ನೀಡಿವೆಯಾದರೂ, ಸೇವೆ ಪಡೆದುಕೊಳ್ಳುವ ನಮ್ಮ ಸರ್ಕಾರಗಳು ಇವರ ಸೇವೆಗೆ ತಕ್ಕ ಪ್ರತಿಫಲ ನೀಡದೆ ನಿರಾಸೆಯಲ್ಲಿರುವಂತೆ ಮಾಡಿವೆ.

ಸುಮಾರು 40,000 ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ, ಇದೇ 2025 ಜನವರಿ 7 ರಿಂದ 10 ನೇ ತಾರೀಖಿನವರೆಗೆ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟವು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದಿದ್ದು ತಮಗೆ ತಿಳಿದಿದೆ. ₹15,000 ರೂಪಾಯಿ ನಿಶ್ಚಿತ ಗೌರವಧನಕ್ಕಾಗಿ ಆಗ್ರಹಿಸಿ ನಡೆಸಿದ ಈ ಹೋರಾಟದಲ್ಲಿ ರಾಜ್ಯದ ಕಾರ್ಯಕರ್ತೆಯರು ಭಾಗವಹಿಸಿದ್ದರು. ಜನವರಿ 10, 2025 ರಂದು ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ, ಮಾನ್ಯ ಮುಖ್ಯಮಂತ್ರಿಗಳು ಸಂಘದ ಪದಾಧಿಕಾರಿಗಳನ್ನು ಕರೆದು ಸಭೆ ಮಾಡಿರುತ್ತಾರೆ. ಈ ಸಭೆಯಲ್ಲಿ ನಮ್ಮೊಂದಿಗೆ ಮಾನ್ಯ ಆರೋಗ್ಯ ಮಂತ್ರಿಗಳು, ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

Advertisements

ಏಪ್ರಿಲ್ 2025ರಿಂದ ಪ್ರತಿ ತಿಂಗಳು ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ₹10,000 ರೂಪಾಯಿಗಳ ಗೌರವಧನವನ್ನು ನೀಡಲಾಗುವುದು. ₹10,000 ಹೊರತುಪಡಿಸಿ, ಕಾಂಪೋನೆಂಟ್‌ಗಳ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಲಾಗುವುದು. ಒಂದು ವೇಳೆ ಯಾರಿಗಾದರೂ ಕಾಂಪೋನೆಂಟ್ಸ್ ಗಳಿಂದ ಕಡಿಮೆ ಮೊತ್ತದ ಪ್ರೋತ್ಸಾಹಧನ ಬಂದಿದ್ದಲ್ಲಿ, ಅಂತಹ ಆಶಾ ಕಾರ್ಯಕರ್ತೆಯರಿಗೆ, ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಿ, ₹10,000 ರೂಪಾಯಿ ಗ್ಯಾರಂಟಿಯಾಗಿ ದೊರೆಯುವಂತೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿತ್ತು. ಈ ಕುರಿತು ಕೂಡಲೇ ಸರ್ಕಾರದಿಂದ ಆದೇಶಿಸಬೇಕು.

ಈ ವರ್ಷದ ಬಜೆಟ್‌ನಲ್ಲಿ ಎಲ್ಲಾ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಳ ಮಾಡಲಾಗುವುದು ಎಂದು ಭರವಸೆ ನೀಡಲಾಗಿತ್ತು. ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ₹1000 ರೂಪಾಯಿ ಹೆಚ್ಚಿಸಿದಂತೆ 42000 ಆಶಾ ಕಾರ್ಯಕರ್ತೆಯರಿಗೆ ₹1000 ರೂಪಾಯಿ ಹೆಚ್ಚಳ ಮಾಡಬೇಕು.

ಆದರೆ, ಈ ಬಜೆಟ್‌ನಲ್ಲಿ ಕೇವಲ 15004 ಆಶಾಗಳಿಗೆ ಕಡಿಮೆ ಇದ್ದ ತಂಡ ಆಧಾರಿತ ಪ್ರೋತ್ಸಾಹಧನ ₹1000 ರೂಪಾಯಿ ಮಾತ್ರ ನೀಡಲಾಗಿದೆ. ಬಹುದಿನಗಳ ಬೇಡಿಕೆಗಳ ಬಗ್ಗೆ ಸೂಕ್ತಕ್ರಮ ಕೈಗೊಳ್ಳಲು ಮಾನ್ಯ ಮುಖ್ಯಮಂತ್ರಿಗಳು ನಿರ್ದೇಶಿಸಿರುತ್ತಾರೆ. ಈ ತೀರ್ಮಾನಗಳನ್ನು ಆರೋಗ್ಯ ಇಲಾಖೆಯ ಆಯುಕ್ತರು ಸರ್ಕಾರದ ಪರವಾಗಿ ಪ್ರತಿಭಟನಾ ಸ್ಥಳ ಫ್ರೀಡಂ ಪಾರ್ಕ್‌ಗೆ ಆಗಮಿಸಿ ಸಾವಿರಾರು ಆಶಾಗಳ ಮುಂದೆ ಬಂದು ಘೋಷಣೆ ಮಾಡಿದರು. ನಂತರ ಹೋರಾಟ ಹಿಂತೆಗೆದುಕೊಳ್ಳಲಾಯಿತು.

ಅಧಿಕೃತವಾಗಿ ಮುಖ್ಯಮಂತ್ರಿಗಳು ಮಾಧ್ಯಮಗಳ ಮೂಲಕ ಘೋಷಿಸಿರುತ್ತಾರೆ. ಆಡಳಿತ ಪಕ್ಷದ ಹಲವಾರು ಸಚಿವರುಗಳು, ಶಾಸಕರು ಈ ಬಗ್ಗೆ ಪೋಸ್ಟಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಆದರೆ, ನೋವಿನ ವಿಷಯವೆಂದರೆ ಇಲ್ಲಿಯವರಗೆ 7 ತಿಂಗಳು ಕಳೆದರೂ ಈ ಕುರಿತು ಸ್ಪಷ್ಟ ಆದೇಶ ಹೊರಬಿದ್ದಿಲ್ಲ. ಮತ್ತೊಂದೆಡೆ, ಆಶಾ ಕಾರ್ಯಕರ್ತೆಯರಿಗೆ ಇತ್ತೀಚಿಗೆ ಇಲಾಖೆಯಿಂದ ಆತಂಕ ಮೂಡಿಸುವ ಕೆಳಗಿನ ಆದೇಶಗಳನ್ನು ಮಾಡಿರುತ್ತಾರೆ.

  1. ಆಶಾಗಳಲ್ಲಿಯೇ ಒಬ್ಬರನ್ನು ಕಳೆದ 10 ವರ್ಷಗಳಿಂದ 20 ಆಶಾಗಳಿಗೆ ಒಬ್ಬರಂತೆ ಸುಮಾರು 2000 ಸುಗಮಕಾರರಾಗಿ ಕೆಲಸಕ್ಕೆ ಪಡೆದುಕೊಂಡು ಧಿಡೀರನೆ ತೆಗೆದು ಹಾಕಿರುವರು. 60 ವರ್ಷ ವಯಸ್ಸಿನ ಆಶಾ ಕಾರ್ಯಕರ್ತೆಯರಿಗೆ ದಿಡೀರನೆ ಕೆಲಸದಿಂದ ತೆಗೆದು ನಿವೃತ್ತಿ ಮಾಡಿರುತ್ತಾರೆ. 17 ವರ್ಷದಿಂದ ಸೇವೆ ಮಾಡಿದ ಆಶಾಗೆ ಯಾವುದೇ ಪರಿಹಾರ ನೀಡದೆ ಬೀದಿಗೆ ತಳ್ಳಿದ್ದಾರೆ.
  2. ಕಾರ್ಯ ನಿರ್ವಹಿಸುವ ಸುಮಾರು 41000 ಆಶಾಗಳಿಗೆ ಅವರ ಕೆಲಸದ ಮೌಲ್ಯಮಾಪನ ಮಾಡುವ ಆದೇಶ ಹೊರಡಿಸಿ ವಿವಿಧ ರೀತಿಯಲ್ಲಿ ಮೌಲ್ಯಮಾಪನ ಮಾಡಿಸುತ್ತಿದ್ದಾರೆ. ಮೌಲ್ಯ ಮಾಪನದ ಮಾದರಿಯನ್ನು ಸಂಘದಿಂದ ಸಂಪೂರ್ಣವಾಗಿ ವಿರೋಧಿಸುತ್ತೇವೆ.
  3. ಆಶಾ ಆನ್ಸೆನ್ ದಾಖಲಾತಿಯನ್ನು (ಆಶಾ ಸಾಫ್ಟ್) ಪರಿಶೀಲನೆಗೆ ತೆಗೆದುಕೊಳ್ಳಲಾಗಿದೆ. ಈಗಾಗಲೇ ಈ ಆನ್ಲೈನ್ ದಾಖಲಾತಿಯು ಸರಿಯಾಗಿ ದಾಖಲಾಗದಿರುವ ಬಗ್ಗೆ, ವೆರಿಫ್ಯ ಮಾಡದಿರುವ ಬಗ್ಗೆ, ಹಲವಾರು ತಾಂತ್ರಿಕ ಸಮಸ್ಯೆಗಳ ಬಗ್ಗೆ ಕಳೆದ ಹಲವಾರು ವರ್ಷಗಳಿಂದ ಸಂಘದಿಂದ ಹೋರಾಡುತ್ತಲೇ ಇದ್ದೇವೆ. ಈಗ ಇದನ್ನು ಮಾದರಿಯಾಗಿ ಇಟ್ಟುಕೊಂಡಲ್ಲಿ ತಪ್ಪು ಮಾಹಿತಿಯಿಂದ ಆಶಾಗಳನ್ನು ಕೈಬಿಡುವಂತಾಗುತ್ತದೆ. ಈಗಾಗಲೇ, ರಾಜ್ಯದ ಆಶಾಗಳು ಕೋಟ್ಯಂತರ ರೂಪಾಯಿಗಳ ನಷ್ಟವನ್ನು ಈ ಆನ್ಲೈನ್ ದಾಖಲಾತಿಯಿಂದ ಅನುಭವಿಸುತ್ತಿರುವರು. ಇದರಿಂದ, ಕೆಲಸ ಕಳೆದುಕೊಳ್ಳುವ ಆತಂಕವನ್ನು ಅನುಭವಿಸುತ್ತಿದ್ದಾರೆ.
  4. ಜನಸಂಖ್ಯೆ ವಿಂಗಡಣೆಯನ್ನು ಈಗಾಗಲೇ ಅಲ್ಲಿಯ ಭೌಗೋಳಿಕರಣಕ್ಕೆ ತಕ್ಕಂತೆ ವಿಂಗಡಿಸಿದ್ದಾರೆ. ಮತ್ತಷ್ಟು ಜನಸಂಖ್ಯೆ ಹೆಚ್ಚಿಸಿದಲ್ಲಿ ಆಶಾಗಳಿಗೆ ಕಾರ್ಯನಿರ್ವಹಿಸಲು ತೊಂದರೆ ಆಗುತ್ತದೆ. 3-4 ಹಳ್ಳಿಗಳು ಬಂದರೆ ಕಾರ್ಯನಿರ್ವಹಿಸಲು ಕಷ್ಟವಾಗುತ್ತದೆ. ಇದರಿಂದ ಆಶಾಗಳಿಗೆ ಆತಂಕ ಸೃಷ್ಟಿಯಾಗಿದೆ.

ಮುಖ್ಯಮಂತ್ರಿಗಳು ಕಳೆದ 7 ತಿಂಗಳ ಹಿಂದೆ ತೀರ್ಮಾನಿಸಿ, ಘೋಷಿಸಿದ ಆದೇಶಗಳನ್ನು ಕೂಡಲೇ ಜಾರಿ ಮಾಡಬೇಕೆಂದು ಮತ್ತು ಕೆಳಗಿನ ಹಕ್ಕೊತ್ತಾಯಗಳಿಗೆ ಆಗ್ರಹಿಸಿ, ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿರುತ್ತಾರೆ. ಈ ಮುಂದೆಯೂ ಆಶಾ ಕಾರ್ಯಕರ್ತೆಯರು ಉನ್ನತ ಹಂತದ ಹೋರಾಟಕ್ಕೆ ಅಣಿಯಾಗಿ ಆಗಸ್ಟ್ 12 ರಿಂದ 14 ರ ವರೆಗೆ ಮೂರು ದಿನಗಳ ರಾಜ್ಯವ್ಯಾಪಿ, ಜಿಲ್ಲಾ ಮಟ್ಟದಲ್ಲಿ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಿ ಸರ್ಕಾರ ಮಾತುಕೊಟ್ಟಂತೆ ನಡೆದುಕೊಳ್ಳಬೇಕೆಂದು ಈ ಮೂಲಕ ಆಗ್ರಹಿಸಲು ಮುಂದಾಗಿರುತ್ತೇವೆ.

ಹಕ್ಕೊತ್ತಾಯಗಳು:

  1. ಮುಖ್ಯಮಂತ್ರಿಗಳು ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ₹10 ಸಾವಿರ ರೂಪಾಯಿ ಗ್ಯಾರಂಟಿಯನ್ನು ಈ ಏಪ್ರಿಲ್ ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು.
  2. 2025 ಮಾರ್ಚ್ ರಾಜ್ಯ ಬಜೆಟ್ ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ₹1000 ರೂಪಾಯಿ ಪ್ರೋತ್ಸಾಹ ಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು.
  3. ತರ್ಕಬದ್ದಗೊಳಿಸುವ ಹೆಸರಿನಲ್ಲಿ ಆತಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈಬಿಡಿ. ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು.
  4. ಅವೈಜ್ಞಾನಿಕ ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು.
  5. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು.
  6. ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು.
  7. ನಗರ ಆಶಾಗಳಿಗೆ ₹2000 ರೂಪಾಯಿ ಗೌರವಧನ ಹೆಚ್ಚಿಸಬೇಕು.
  8. 2025 ಜೂನ್-ಜುಲೈನಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು.

ಈ ಸುದ್ದಿ ಓದಿದ್ದೀರಾ? ಮೈಸೂರು | ಉತ್ತಮ ವಸತಿ ನಿಲಯ, ಸೌಲಭ್ಯಗಳನ್ನು ಒದಗಿಸುವಂತೆ ವಿದ್ಯಾರ್ಥಿನಿಯರ ಪ್ರತಿಭಟನೆ

ಪತ್ರಿಕಾ ಗೋಷ್ಠಿಯಲ್ಲಿ ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಮೇಟಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷರಾದ ಭಾಗ್ಯ, ಉಪಾಧ್ಯಕ್ಷೆ ಮನಿಲ, ನಗರಾಧ್ಯಕ್ಷೆ ಕೋಮಲ, ಮೈಸೂರುನಗರ ಸಮಿತಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪವಿತ್ರ, ಟಿ ನರಸೀಪುರ ತಾಲ್ಲೂಕು ಕಾರ್ಯದರ್ಶಿ ಸೀಮಾ, ಮೈಸೂರು ನಗರ ಸಲಹೆಗಾರರು, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸಂಧ್ಯಾ ಪಿ.ಎಸ್ ಸೇರಿದಂತೆ
ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

Download Eedina App Android / iOS

X