ಹಾಸನ ಜಿಲ್ಲೆಯ ತೆಂಗು ಬೆಳೆಗಾರರು ಎದುರಿಸುತ್ತಿರುವ ತೀವ್ರ ಸಂಕಷ್ಟಕ್ಕೆ ತುರ್ತು ಪರಿಹಾರ ಕೋರಿ ಸಂಸದ ಶ್ರೇಯಸ್ ಎಂ. ಪಟೇಲ್ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದರು. ಕೀಟ ಮತ್ತು ರೋಗ ಬಾಧೆಗಳಿಂದಾಗಿ ಜಿಲ್ಲೆಯ ಲಕ್ಷಾಂತರ ಬೆಳೆಗಾರರು ಅನುಭವಿಸುತ್ತಿರುವ ಆರ್ಥಿಕ ನಷ್ಟದ ಕುರಿತು ಸಚಿವರಿಗೆ ವಿವರವಾದ ವರದಿಯನ್ನು ಸಲ್ಲಿಸಿದರು.
ತೆಂಗು ಅಭಿವೃದ್ಧಿ ಮಂಡಳಿ (CDB) ಮತ್ತು CPCRI ನಂತಹ ಕೇಂದ್ರ ಸಂಸ್ಥೆಗಳ ಮೂಲಕ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಶ್ರೇಯಸ್ ಮನವಿ ಮಾಡಿದರು. ಅರಸೀಕೆರೆ ಮತ್ತು ಹೊಳೆನರಸೀಪುರದಲ್ಲಿರುವ ಜೈವಿಕ ನಿಯಂತ್ರಣ ಪ್ರಯೋಗಾಲಯಗಳನ್ನು ಮೇಲ್ದರ್ಜೆಗೇರಿಸುವುದು, ಹಾಗೂ ಹಾಸನ ಜಿಲ್ಲೆಯಾದ್ಯಂತ ಕೀಟ ನಿರ್ವಹಣಾ ಕಾರ್ಯಕ್ರಮಗಳನ್ನು ವಿಸ್ತರಿಸುವಂತೆ ಅವರು ಒತ್ತಾಯಿಸಿದರು.
ಇದನ್ನೂ ಓದಿ: ಹಾಸನ | ಆ.15ರಂದು ಜನಾರೋಗ್ಯ ಸ್ವಾತಂತ್ರ‍್ಯಕ್ಕಾಗಿ ಸಾಮೂಹಿಕ ಧರಣಿ: ಧರ್ಮೇಶ್
ತೆಂಗು ರೈತರ ಬದುಕು ಮತ್ತು ಆರ್ಥಿಕತೆಗೆ ಭದ್ರತೆ ಒದಗಿಸಲು ಕೇಂದ್ರ ಸರ್ಕಾರದ ಸಹಕಾರ ಅತ್ಯಗತ್ಯ ಎಂದು ಶ್ರೇಯಸ್ ಪಟೇಲ್ ಅವರು ಒತ್ತಿ ಹೇಳಿದ್ದಾರೆ. ಕೇಂದ್ರ ಸಚಿವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ತೆಂಗು ಬೆಳೆಗಾರರ ನೆರವಿಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ. ಈ ಭೇಟಿಯು, ಜಿಲ್ಲೆಯ ಕೃಷಿ ಕ್ಷೇತ್ರದ ಪುನಶ್ಚೇತನಕ್ಕೆ ಹೊಸ ಆಶಯ ಮೂಡಿಸಿದೆ.