ರಾಹುಲ್‌ ಗಾಂಧಿ ಆರೋಪ ಹತಾಶೆಯ ಪರಮಾವಧಿ: ಸಂಬಿತ್ ಪಾತ್ರಾ

Date:

Advertisements

ಬಿಜೆಪಿಯೊಂದಿಗೆ ಚುನಾವಣಾ ಆಯೋಗ ಕೈಜೋಡಿಸಿದೆ ಎಂದು ಆರೋಪಿಸಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್​​ ಗಾಂಧಿಗೆ ತಿರುಗೇಟು ನೀಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಇದು ಹತಾಶೆಯ ಪರಮಾವಧಿ ಎಂದಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾತ್ರ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣದಲ್ಲಿ ಗೆಲುವು ಸಾಧಿಸಿದಾಗ ಯಾವುದೇ ರೀತಿಯ ಆಕ್ಷೇಪ ವ್ಯಕ್ತಪಡಿಸಲಿಲ್ಲ. ನಿಮ್ಮ ಪಕ್ಷ ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸಿದಾಗ ಚುನಾವಣಾ ಆಯೋಗದಿಂದ ವಂಚನೆಯಾಗಿದೆ ಎಂದು ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸಿಲ್ಲ, ಈ ಆಯ್ದ ಆಕ್ರೋಶವನ್ನು ದೇಶದ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿ ಮೋದಿಗೆ ಅದಾನಿ-ಅಂಬಾನಿ ದೋಸ್ತಿ ತಂದ ದುರ್ಗತಿ

Advertisements

ಭಾರತೀಯ ಚುನಾವಣಾ ಆಯೋಗವು ರಾಜಿ ಮಾಡಿಕೊಂಡಿದೆ ಎನ್ನುವ ರಾಹುಲ್, ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿನ 99 ಸ್ಥಾನಗಳ ವಿಜಯವನ್ನು ಹೇಗೆ ಆಚರಿಸಬಹುದು ಎಂದು ಪ್ರಶ್ನಿಸಿದರು. ಬಿಜೆಪಿ ದೀರ್ಘಕಾಲ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತರು ನಮ್ಮ ಯಾವ ನಾಯಕರು ಕೂಡ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಬೆದರಿಕೆ ಹಾಕಿರಲಿಲ್ಲ ಎಂದರು.

ನನ್ನ ಪತ್ರಿಕಾಗೋಷ್ಠಿಗೆ ಯಾವುದೇ ಉತ್ತರ ನೀಡದಿದ್ದರೆ, ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದಿರುವ ರಾಹುಲ್ ಗಾಂಧಿ, ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಚುನಾವಣಾ ಆಯೋಗದ ಪ್ರತಿಯೊಬ್ಬ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ. ಇದು ವಿಪಕ್ಷ ನಾಯಕ ಬಳಸುವ ಭಾಷೆಯೇ?, ಅಲ್ಲ ಇದು ಚುನಾವಣಾ ಕೋಪದ ಭಾಷೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X