“ಗುತ್ತಲದ ೯ನೇ ತರಗತಿಯ ವಿದ್ಯಾರ್ಥಿನಿಯ ಮೇಲೆನ ಲೈಂಗಿಕ ದೌರ್ಜನ್ಯ ಎಸಗಿರುವ ಶಿಕ್ಷಕನ ಮೇಲೆ ಕಠಿಣ ಕ್ರಮ ಜರುಗಿಸಬೇಕು” ಎಂದು ವಿದ್ಯಾರ್ಥಿಗಳು ಒತ್ತಾಯಿದರು.
ಹಾವೇರಿ ಪಟ್ಟಣದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್, ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಹಾಗೂ ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಮೇಲೆ ಕ್ರಮ ಜರುಗಿಸುವಂತೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಎಸ್ಎಫ್ಐ ಕಾಲೇಜ್ ಘಟಕ ಅಧ್ಯಕ್ಷೆ ಚೈತ್ರ ಕೊರವರ್ ಕಾರ್ಯದರ್ಶಿ ಗಂಗಾ ಯಲ್ಲಾಪುರ ಮಾತನಾಡಿ, “ದೇಶ, ರಾಜ್ಯ ಸೇರಿದಂತೆ ಜಿಲ್ಲೆಯಲ್ಲಿಯೂ ವಿದ್ಯಾರ್ಥಿನಿಯರು, ಮಹಿಳೆಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯಗಳು ಆತ್ಯಾಚಾರ ನಡೆಯುತ್ತಿರುವುದು ಖಂಡನೀಯ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ಗುತ್ತಲದ 9ನೇ ತರಗತಿಯ ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ ಶಿಕ್ಷಕನ ಮೇಲೆ ಶಿಸ್ತು ಕ್ರಮ ಜರುಗಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಶಾಲಾ-ಕಾಲೇಜ್, ಹಾಸ್ಟೆಲ್ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು” ಎಂದು ಆಗ್ರಹಿಸಿದರು.
ಕೆ.ಎಸ್.ಡಿ.ಎಫ್ ಮುಖಂಡರಾದ ತಿಪ್ಪೇಸ್ವಾಮಿ ಹೊಸಮನಿ, ಬಿಎಸ್ಎಸ್ ಪ್ರಧಾನ ಕಾರ್ಯದರ್ಶಿ ಲಕ್ಷ್ಮಿ ಎಸ್ಎಫ್ಐ ಮುಖಂಡರಾದ ಹಜರತ್ ಬಿ ಮಾತನಾಡಿದರು.
ಈ ಸುದ್ದಿ ಓದಿದ್ದೀರಾ? ಗದಗ | ಪದ್ಮಲತಾ, ವೇದವಲ್ಲಿ, ಸೌಜನ್ಯ ಪ್ರಕರಣಗಳನ್ನು SIT ತನಿಖೆಗೊಳಪಡಿಸಲು ಎಸ್ಎಫ್ಐ ಒತ್ತಾಯ
ಪ್ರತಿಭಟನೆಯಲ್ಲಿ ಎಸ್ ಎಫ್ ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಡಿ ವೈ ಎಫ್ ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪುಜಾರ, ಮುಖಂಡರು ಸುನೀಲ್ ಕುಮಾರ್ ಎಲ್, ಅರುಣ ಕುಮಾರ ನಾಗವತ್, ಫಕ್ಕರೇಶ್ ಮ್ಯಗಳಮನಿ, ಸುದೀಪ್ ಲಮಾಣಿ, ನವೀನ್ ರಾಥೋಡ್, ಚೇತನ್ ಲಮಾಣಿ ,ಮುತ್ತಪ್ಪ ಲಮಾಣಿ, ವಿಜಯ್ ಎನ್, ಸಂಜೀವ ಕೆ, ವಿನಾಯಕ್, ಶಿವು, ರಾಹುಲ ಲಮಾಣಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.