ಒಳ ಮೀಸಲಾತಿಗಾಗಿ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ವರದಿ ನೀಡಿದ್ದು, ಮುಂಗಾರು ಅಧಿವೇಶನದಲ್ಲಿ ಅಂಗೀಕಾರಿಗೊಳಿಸಿ ಎಂದು ಆಗ್ರಹಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾತಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಸವೇಶ್ವರ ವೃತ್ತ ಮೂಲಕ ಜಿಲ್ಲಾಧಿಕಾರಿಗೆ ಬೈಕ್ ರ್ಯಾಲಿ ನಡೆಸಿ ಒಳ ಮೀಸಲಾತಿ ಜಾರಿಗೆ ವಿಳಂಬ ಮಾಡಿದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.
ಪರಿಶಿಷ್ಟ ಜಾತಿಗಳ ಒಳ ಮೀಸಲು ವರ್ಗೀಕರಣಕ್ಕೆ ರಚಿಸಿದ ನ್ಯಾ.ನಾಗಮೋಹನದಾಸ್ ನೇತೃತ್ವದ ಸಮಿತಿ ಅಂತಿಮ ವರದಿಯನ್ನು ಸರ್ಕಾರಕ್ಕೆ ನೀಡಿದೆ. ಸಚಿವ ಸಂಪುಟಯಲ್ಲಿ ಚರ್ಚಿಸಿ ನಿರ್ಧರಿಸಿ ಮುಂಗಾರು ಅಧಿವೇಶನದಲ್ಲಿ ಅಂಗೀಕಾರಗೊಳಿಸಿ ಜಾರಿಗೊಳಿಸಬೇಕು ಎಂದು ಅಗ್ರಹಿಸಿದರು.
ರಾಜ್ಯ ಸರ್ಕಾರ ಒತ್ತಡಕ್ಕೆ ಮಣಿದು ಜಾರಿಗೆ ವಿಳಂಬ ಧೋರಣೆ ಅನುಸರಿದೇ ಸಚಿವ ಸಂಪುಟದಲ್ಲಿ ಚರ್ಚಿಸಬೇಕು. ತೆಲಂಗಾಣದ ರಾಜ್ಯ ಸರ್ಕಾರದ ಮುಖ್ಯಮಂತ್ರಿ ರೇವಂತರೆಡ್ಡಿ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸಿ ಅಂಗೀಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಒಳಮೀಸಲಾತಿ ಜಾರಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗವೂ 1 ಕೋಟಿ 16 ಲಕ್ಷ ಪರಿಶಿಷ್ಟ ಜಾತಿಗಳ ಜನಸಂಖ್ಯೆ ಇರಬಹುದೆಂದು ಅಂದಾಜಿಸಿತ್ತು. ಆದರೆ 1 ಕೋಟಿ 7ಲಕ್ಷ ಜನರನ್ನು ಗಣಿತಿಯಲ್ಲಿ ಪರಿಗಣಿಸಿದೆ ಸರಿ ಸುಮಾರು 9 ಲಕ್ಷ ಜನರು ಗಣತಿಯಿಂದ ಹೊರಗುಳಿದಿದ್ದಾರೆ. ಸ್ಪಷ್ಟತೆ ಇಲ್ಲದೇ ಹೋಗಿದೆ. ರಾಜ್ಯ ಸರ್ಕಾರ ಸ್ಪಷ್ಟ ನಿರ್ಧಾರಕ್ಕೆ ಬರಬೇಕು ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಅಂಗನವಾಡಿ ಶಾಲೆಯ ಮೇಲ್ಛಾವಣಿ ಕುಸಿತ: ಸಹಾಯಕಿಗೆ ಗಂಭೀರ ಗಾಯ, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಸಂಚಾಲಕ ಎಸ್.ಮಾರೆಪ್ಪ, ಹೇಮರಾಜ್ ಅಸ್ಕಿಹಾಳ, ಅಂಜಿನಯ್ಯ ಉಟ್ಟೂರು, ನರಸಿಂಹಲು ಮರ್ಚಟ್ಟಾಳ, ಶ್ರೀನಿವಾಸ ಕೊಪ್ಪರ, ಅಬ್ರಹಾಂ ಕಮಾಲಾಪುರು, ಆಂಜನೇಯ ಕುರುಬದೊಡ್ಡಿ, ತಾಯಪ್ಪ ಗಧಾರ, ಲಕ್ಷಣ ಕಲ್ಲೂರು, ಕೃಷ್ಣ ಸೇರಿ ಅನೇಕರಿದ್ದರು
