ಮತಗಳ್ಳತನ ತಡೆಯಲು ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವುದೇ ಪರಿಹಾರ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಚುನಾವಣಾ ಆಯೋಗಕ್ಕೆ ಸಲಹೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, “ಮತಗಳ್ಳತನಕ್ಕೆ ಒಂದೇ ಮದ್ದು ಎಂದರೆ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ” ಎಂದು ಹೇಳಿದ್ದಾರೆ.
ಮತಗಳ್ಳತನ ಎಂಬುದು ಕೆಲವರ ಕಪಟ ಕಥೆ ಎಂದು ಟೀಕಿಸಿರುವ ಸಚಿವರು; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದು ಆಯೋಗಕ್ಕೆ ಸಲಹೆ ಮಾಡಿದ್ದಾರೆ.
“ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ. ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ (Benefit of the doubt) ಪಡೆಯುವ ಕಿಡಿಗೇಡಿ ಪಿತೂರಿ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೊಬೆಲ್ ರಾಜಕಾರಣವಾಗಿದೆ” ಎಂದು ಆರೋಪಿಸಿದ್ದಾರೆ.
My brother recommended I might like this web site. He was entirely right. This post truly made my day. You cann’t imagine simply how much time I had spent for this information! Thanks!