ಶಿವಮೊಗ್ಗ | ಸ್ಥಳೀಯ ಪಂಚಾಯಿತಿಗಳ ಚುನಾವಣೆ ನಡೆಸದ ಸಿಎಂ, ಸಚಿವರುಗಳ ; ವಿರುದ್ಧ ಕಾನೂನು ಕ್ರಮ ಜರುಗಿಸಿ

Date:

Advertisements

ಶಿವಮೊಗ್ಗ, ರಾಜ್ಯದ ಹೈಕೋರ್ಟ್ ಮತ್ತು ದೇಶದ ಸುಪ್ರಿಂ ಕೋರ್ಟ್ ಆದೇಶಗಳನ್ನು ಉಲ್ಲಂಘಿಸಿ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಗಳ ಚುನಾವಣೆಗಳನ್ನು 2 ವರ್ಷಗಳಿಂದ ನಡೆಸದೇ ಇರುವುದರಿಂದ ರಾಜ್ಯ ಚುನಾವಣಾ ಆಯೋಗವು ಮುಖ್ಯಮಂತ್ರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ನಗರಾಭಿವೃದ್ಧಿ ಸಚಿವರ ಮೇಲೆ ಶಿಸ್ತುbಕ್ರಮ ಕೈಗೊಳ್ಳಬೇಕೆಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಟ್ರಸ್ಟ್ ಮುಖ್ಯಸ್ಥ ಕಲ್ಲೂರು ಮೇಘರಾಜ, ರಾಜ್ಯದ 187 ಸ್ಥಳೀಯ ಸಂಸ್ಥೆಗಳ ಅವಧಿಯು ಬರುವ ನವೆಂಬರ್ ಗೆ ಮುಗಿಯಲಿದೆ. ರಾಜ್ಯದಲ್ಲಿ ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾಪಂಚಾಯತ್ ಚುನಾವಣೆಗಳು ಕಳೆದ 4 ವರ್ಷಗಳಿಂದ ನಡೆದಿಲ್ಲ.

ಬಸವರಾಜ್ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರ ಎರಡು ವರ್ಷಗಳ ಕಾಲ ಚುನಾವಣೆ ನಡೆಸದೆ ಕಾಲಹರಣ ಮಾಡಿದೆ. ಈಗ ಸಿದ್ದರಾಮಯ್ಯನವರ ಸರ್ಕಾರವೂ ಸಹ ಮೀಸಲಾತಿ ಹಾಗೂ ಕ್ಷೇತ್ರ ವಿಂಗಡಣೆಯ ಕುಂಟು ನೆಪವೊಡ್ಡಿ, ಪಂಚಾಯತ್ ರಾಜ್ ಕಾಯ್ದೆಯ ಮೂಲ ಆಶಯಕ್ಕೆ ಧಕ್ಕೆ ಬರುವ ರೀತಿ ಕಾಲದಿಂದ ಕಾಲಕ್ಕೆ ಕೋರ್ಟ್‌ ಆದೇಶಗಳಿದ್ದರೂ ಸಹ ಚುನಾವಣೆಗಳನ್ನು ಮುಂದೂಡುತ್ತಾ ಬಂದಿದೆ ಎಂದರು.

Advertisements

ರಾಜ್ಯದ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಚುನಾವಣೆಯ ವಿಳಂಬಕ್ಕೆ ಹೊಣೆಗಾರರಾದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಬೇಕಾದೀತು ಎಂದು ಎಚ್ಚರಿಸಿದ್ದಾರೆ. ವಾಸ್ತವವಾಗಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಶಾಸಕಾಂಗವೇ ಅಂದರೆ ರಾಜ್ಯ ಸರ್ಕಾರವೇ ಕಾರ್ಯಾಂಗದ ಮೇಲೆ ಅಂದರೆ ಅಧಿಕಾರಿಗಳ ಮೇಲೆ ಅಂದರೆ ಅಧಿಕಾರಿಗಳ ಮೇಲೆ ಹಿಡಿತ ಸಾಧಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ರಾಜ್ಯ ಸರ್ಕಾರವು ಮುಖ್ಯ ಕಾರ್ಯದರ್ಶಿಗಳನ್ನೊಳಗೊಂಡು ಎಲ್ಲಾ ಅಧಿಕಾರಿಗಳ ಮೇಲೆ ದಬ್ಬಾಳಿಕೆಯ ಆಡಳಿತ ನಡೆಸುತ್ತಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಕೊಂಡಜ್ಜಿ ವಿಜಯಕುಮಾರ್, ಹೊಳೆಮಡಿಲು ವೆಂಕಟೇಶ, ಶಂಕರ ನಾಯ್ಕ್, ಸಂಗಯ್ಯ, ಜನಮೇಜಿರಾವ್ ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

Download Eedina App Android / iOS

X