ಧರ್ಮಸ್ಥಳ ಪ್ರಕರಣ | ಹೊಸ ಸ್ಥಳಗಳ ಗುರುತಿಸುವ ಕಾರ್ಯ ಆರಂಭಿಸಿದ ಎಸ್‌ಐಟಿ ಅಧಿಕಾರಿಗಳು

Date:

Advertisements

ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಹೊಸ ಸ್ಥಳಗಳನ್ನು ತೋರಿಸಿದ್ದು, ಎಸ್‌ಐಟಿ ಅಧಿಕಾರಿಗಳು ಹೊಸ ಸ್ಥಳಗಳ ಗುರುತು ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಧರ್ಮಸ್ಥಳ ಗ್ರಾಮದ ಬೊಳಿಯಾರ್ ಸಮೀಪಕ್ಕೆ ಎಸ್‌ಐಟಿ ತಂಡವು ದೂರುದಾರನೊಂದಿಗೆ ಆಗಮಿಸಿದೆ. ಕಳೆದ ಎರಡು ವಾರಗಳಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪ ಸಾಕ್ಷಿ ದೂರುದಾರ ತೋರಿಸಿದ ಜಾಗದಲ್ಲಿ ಅಧಿಕಾರಿಗಳ ತಂಡ ಉತ್ಖನನ ಪ್ರಕ್ರಿಯೆ ನಡೆಸಿತು.

ಇದನ್ನು ಓದಿದ್ದೀರಾ? BREAKING NEWS | ಧರ್ಮಸ್ಥಳ ಪ್ರಕರಣ: ಪಾಯಿಂಟ್ ನಂ 11ರ ಸಮೀಪದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ

Advertisements

ಇದೀಗ ಹೊಸ ಸ್ಥಳವನ್ನು ಸಾಕ್ಷಿದಾರ ಕರೆತಂದಿದ್ದು ಎಷ್ಟು ಸ್ಥಳಗಳ ಗುರುತು ಮಾಡಬಹುದು ಎಂಬುದು ಖಚಿತವಾಗಿಲ್ಲ.

ಈಗಾಗಲೇ ನೇತ್ರಾವತಿ ಸ್ನಾನಘಟ್ಟದಲ್ಲಿ ಒಂದು ಹಂತದ ಕಾರ್ಯಾಚರಣೆ ಮುಗಿಸಿದ ಎಸ್‌ಐಟಿ ಎರಡನೇ ಹಂತದ ಕಾರ್ಯಾಚರಣೆಗೆ ಮುಂದಾಗಿದೆ. ಮೊದಲ ಹಂತದಲ್ಲಿ ಎರಡು ಸ್ಥಳಗಳಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿತ್ತು. ಇದೀಗ ಬೊಳಿಯಾರು ಪ್ರದೇಶದಲ್ಲಿ ಸ್ಥಳ ಗುರುತಿಸುವ ಕಾರ್ಯ ಆರಂಭವಾಗಿದೆ. ಆದರೆ ನೇತ್ರಾವತಿ ಸ್ನಾನಘಟ್ಟದಲ್ಲಿರುವ ವಿವಾದಿತ 13ನೇ ಸ್ಥಳವನ್ನು ಇನ್ನೂ ಅಗೆದಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X