ಕವಾಡಿಗರಹಟ್ಟಿಗೆ ಲೋಕಾಯುಕ್ತ ನ್ಯಾ. ಬಿ ಎಸ್‌ ಪಾಟೀಲ್‌ ದಿಢೀರ್‌ ಭೇಟಿ, ಅಧಿಕಾರಿಗಳಿಗೆ ತರಾಟೆ

Date:

Advertisements
  • ಲೋಕಾಯುಕ್ತರ ಮುಂದೆ ಸಂಕಷ್ಟ ಹೇಳಿಕೊಂಡ ಜನತೆ
  • ಶೌಚಾಲಯ ನಿರ್ಮಿಸಲು ನಗರಸಭೆ ಪೌರಾಯುಕ್ತರಿಗೆ ತಾಕೀತು

ಕಲುಷಿತ ನೀರು ಕುಡಿದು ಜನರು ಅಸ್ವಸ್ಥಗೊಂಡ ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್‌ ಪಾಟೀಲ್‌ ಅವರು ಶುಕ್ರವಾರ ಬೆಳಗ್ಗೆ ದಿಢೀರ್ ಭೇಟಿ ಪರಿಶೀಲನೆ ನಡೆಸಿದರು.

ಈ ವೇಳೆ ಜನರು ಲೋಕಾಯುಕ್ತ ನ್ಯಾಯಮೂರ್ತಿ ಎದುರು ತಮ್ಮ ಸಂಕಷ್ಟಗಳ ಬಗ್ಗೆ ಹೇಳಿಕೊಂಡು, ಮೂಲಸೌಲಭ್ಯ ಕಲ್ಪಿಸುವಂತೆ ಅವರನ್ನು ಮನವಿ ಮಾಡಿದರು.

ಕಾಲರಾ ರೋಗಕ್ಕೆ ತುತ್ತಾದ ಮಂಜುಳ ಅವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಮನೆಯ ಸ್ಥಿತಿ, ಅನೈರ್ಮಲ್ಯದ ವಾತಾವರಣ ಕಂಡು ಶೌಚಾಲಯದ ಬಗ್ಗೆ ಪ್ರಶ್ನಿಸಿದರು. ಬಯಲು ಬಹಿರ್ದೆಸೆಗೆ ತೆರಳುತ್ತಿರುವುದಾಗಿ ಕುಟುಂಬಸ್ಥರು ಮಾಹಿತಿ ನೀಡಿದರು. ಸ್ಥಳದಲ್ಲೇ ಇದ್ದ ನಗರಸಭೆ ಪೌರಾಯುಕ್ತ ಶ್ರೀನಿವಾಸ್‌ ಅವರನ್ನು ತರಾಟೆ ತೆಗೆದುಕೊಂಡ ಬಿ ಎಸ್‌ ಪಾಟೀಲ್‌ ಅವರು, ಶೌಚಾಲಯ ನಿರ್ಮಿಸಿಕೊಡುವಂತೆ ತಾಕೀತು ಮಾಡಿದರು.

Advertisements

ನಗರಸಭೆ ಪೌರಾಯುಕ್ತ ಶ್ರೀನಿವಾಸ್‌ ಪ್ರತಿಕ್ರಿಯಿಸಿ, “‘ಸ್ಥಳಾವಕಾಶದ ಕೊರತೆ ಇರುವುದರಿಂದ ಶೌಚಾಲಯ ನಿರ್ಮಾಣ ಸಾಧ್ಯವಾಗಿಲ್ಲ” ಎಂದು ಸಮಜಾಯಿಷಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರ ಸುಡದಿರಲಿ ಬಿಲ್ ಬಾಕಿ ಬೆಂಕಿ ಕಿಡಿ

ನ್ಯಾಯಮೂರ್ತಿ ಸಂಚಾರ

ಬೆಳಗ್ಗೆ 7.30 ರಿಂದ 11 ಗಂಟೆಯವರೆಗೆ ನಗರದ ವಿವಿಧ ರಸ್ತೆಗಳು, ಬಡಾವಣೆಗಳಲ್ಲಿ ನ್ಯಾಯಮೂರ್ತಿ ಅವರು ಸಂಚಾರ ನಡೆಸಿದರು. ಮೆದೇಹಳ್ಳಿ ರಸ್ತೆ, ಹೊರಪೇಟೆ, ಬಸವೇಶ್ವರ ಟಾಕೀಸ್ ರಸ್ತೆ, ಜೆಸಿಆರ್ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಅಕ್ಕಪಕ್ಕದಲ್ಲಿ ಬಿದ್ದಿರುವ ಕಸದ ರಾಶಿ ಕಂಡು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಭೇಟಿ ವೇಳೆ ವೈದ್ಯರೇ ಇರಲಿಲ್ಲ

ತಾತ್ಕಾಲಿಕ ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿಗಳು ಭೇಟಿ ನೀಡಿದಾಗ ವೈದ್ಯರೇ ಇರಲಿಲ್ಲ. ಶುಶೂಷಕರು ಮಾತ್ರ ಇರುವುದನ್ನು ಕಂಡು ಅಸಮಾಧಾನ ಹೊರಹಾಕಿದ ಪಾಟೀಲ್‌ ಅವರು, ಜನರಿಗೆ ವೈದ್ಯಕೀಯ ಸೇವೆಯನ್ನು ಸರಿಯಾಗಿ ಒದಗಿಸುವಂತೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X