“ದೃಶ್ಯಮಾಧ್ಯಮದಲ್ಲಿ ತೋರುತ್ತಿರುವ ದೂರುದಾರ ವ್ಯಕ್ತಿಯನ್ನು ಗ್ರಾಮಸ್ಥರಾದ ನಾವು ಗುರುತಿಸಿರುತ್ತೇವೆ. ಆತ ರಹಸ್ಯವಾಗಿ ಜನರಿಗೆ ಕಾಣದಂತೆ ಧರ್ಮಸ್ಥಳ ಗ್ರಾಮದ ವಿವಿಧೆಡೆ ಶವಗಳನ್ನು ಕೊಂಡೊಯ್ದು ಹೂತುಹಾಕಿರುವುದನ್ನು ನಾವು ವಿವಿಧ ಸ್ಥಳಗಳಲ್ಲಿ ನೋಡಿರುತ್ತೇವೆ” ಎಂದು ಇನ್ನಿಬ್ಬರು ಧರ್ಮಸ್ಥಳ ಗ್ರಾಮಸ್ಥರು ಎಸ್‌ಐಟಿಗೆ ತಿಳಿಸಿದ್ದು, ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದಾರೆ.
“ಆತ ರಹಸ್ಯವಾಗಿ ಹೂತುಹಾಕಿರುವುದಾಗಿ ಭಾವಿಸಿದರೂ, ಗ್ರಾಮಗಳಲ್ಲಿ ಇಂತಹ ವಿಷಯಗಳು ರಹಸ್ಯವಾಗಿ ಉಳಿಯುವುದಿಲ್ಲವೆಂಬುದು ತಮಗೆ ತಿಳಿದಿರುತ್ತದೆ. ಜನರ ರಕ್ಷಣೆಗೆಂದು ಮಾನ್ಯ ಮುಖ್ಯಮಂತ್ರಿಗಳು ಸ್ಥಾಪಿಸಿರುವ ಈ ವಿಶೇಷ ತನಿಖಾದಳಕ್ಕೆ ನಾವು ಸಹಕಾರ ನೀಡಲೇಬೇಕು ಎಂದು ತೀರ್ಮಾನಿಸಿರುತ್ತೇವೆ. ದೂರುದಾರನು ತೋರುತ್ತಿರುವ ಸ್ಥಳಗಳಲ್ಲಿ ಮೃತದೇಹಗಳ ಕಳೇಬರಗಳನ್ನು ಹೊರತೆಗೆಯುವ ಕಾರ್ಯಾಚರಣೆಯಲ್ಲಿ ನಮ್ಮನ್ನು ಒಳಗೊಳಪಡಿಸಲು ಕೋರುತ್ತೇವೆ. ಆತ ರಹಸ್ಯವಾಗಿ ಹೂತುಹಾಕುತ್ತಿದ್ದ ಸ್ಥಳಗಳನ್ನು ನಾವು ಎಲ್ಲೆಲ್ಲಿ ನೋಡಿದ್ದೇವೆ ಎಂದು ಸ್ವತಂತ್ರವಾಗಿ ತೋರಿಸುವ ಅವಕಾಶವನ್ನೂ ಕೋರುತ್ತೇವೆ” ಎಂದು ಸಾಕ್ಷಿದಾರರು ತಿಳಿಸಿದ್ದಾರೆ.
ಇದನ್ನೂ ಓದಿರಿ: ಧರ್ಮಸ್ಥಳ ಪ್ರಕರಣ | ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ; ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ
ಎರಡು ಸಾಕ್ಷಿಗಳ ಪ್ರತ್ಯೇಕ ದೂರನ್ನು ಒಂದೇ ಪ್ರಕರಣದಲ್ಲಿ ವಿಲೀನಗೊಳಿಸಲಾಗಿದೆ. ಕೆಲವು ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಾಗದ ಕಾರಣ ಅವುಗಳನ್ನು ಪತ್ರದಲ್ಲಿ ಮರೆಮಾಡಲಾಗಿದೆ ಎಂದು ತಿಳಿದುಬಂದಿದೆ.
