ರೈತರಿಗೆ ಮುಂಗಾರು ಬಿತ್ತನೆಗೆ ರಸಗೊಬ್ಬರ ಅವಶ್ಯಕತೆ ಇದ್ದರೂ, ಸರಿಯಾಗಿ ರಸಗೊಬ್ಬರ ವಿತರಣೆ ಮಾಡುವುದರಲ್ಲಿ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶಹಾಪುರ ಪಟ್ಟಣದ ಚರಬಸವೇಶ್ವರರ ಕಾಮನ್‌ದಿಂದ ಬಸವೇಶ್ವರ ವೃತ್ತದವರೆಗೂ ಪಾದಯಾತ್ರೆ ಮಾಡುವುದರ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಎರಡು-ಮೂರು ದಿನಗಳ ಒಳಗಾಗಿ ರೈತರಿಗೆ ಸಂಪರ್ಕವಾಗಿ ರಸಗೊಬ್ಬರ ಪೂರೈಕೆ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.
ಒಂದು ವೇಳೆ ರಸಗೊಬ್ಬರ ಪೂರೈಸುವಲ್ಲಿ ವಿಫಲರಾದರೆ ಭಾರತೀಯ ಜನತಾ ಪಾರ್ಟಿ ಮತ್ತು ರೈತ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಕೋಮುವಾದಿ ವ್ಯಕ್ತಿಗಳನ್ನು ಜಿಲ್ಲೆಯಿಂದ ಹೊರಹಾಕಿ: ಜಿಲ್ಲಾಡಳಿತಕ್ಕೆ ಡಾ. ನಂದಕುಮಾರ್ ಆಗ್ರಹ
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ಗೌಡ ವಿಭೂತಿಹಳ್ಳಿ, ನಿಕಟ ಪೂರ್ವ ಅಧ್ಯಕ್ಷ ಅಮೀನ್ ರೆಡ್ಡಿ ಪಾಟೀಲ್ ಯಾಳಗಿ, ವೈದ್ಯ ಡಾ. ಚಂದ್ರಶೇಖರ ಸುಬೇದಾರ್, ದೇವಿಂದ್ರಾಪ್ಪ ಕೊಯಿನೋರ್, ಮಹೇಶ ರಸ್ತಾಪುರ್, ತಿಪ್ಪಣ್ಣ, ಆಶೋಕ್ ಮಲ್ಲಬಾದ್, ಕರಿಬಸಪ್ಪ ಬಿಲ್ಹರ್ ಸೇರಿದಂತೆ ಭಾರತೀಯ ಜನತಾ ಪಕ್ಷ ಮುಖಂಡರು, ರೈತರು ಭಾಗವಹಿಸಿದ್ದರು.
