ʼಆದಾಯ ತೆರಿಗೆ ಮಸೂದೆ-2025ʼಅನ್ನು ಹಿಂಪಡೆದ ಕೇಂದ್ರ; ಸೋಮವಾರ ಹೊಸ ಮಸೂದೆ ಮಂಡನೆ

Date:

Advertisements

ಸುಮಾರು 64 ವರ್ಷಗಳಷ್ಟು ಹಳೆಯದಾದ ‘ಆದಾಯ ತೆರಿಗೆ ಕಾಯ್ದೆ-1961’ಅನ್ನು ಬದಲಿಸಲು ಕೇಂದ್ರ ಸರ್ಕಾರವು ಹೊಸ ಮಸೂದೆಯನ್ನು ರೂಪಿಸಿತ್ತು. ಹಿಂದಿನ ಬಜೆಟ್‌ ಅಧಿವೇಶನದಲ್ಲಿ ‘ಆದಾಯ ತೆರಿಗೆ ಮಸೂದೆ-2025’ಅನ್ನು ಫೆಬ್ರವರಿ 13ರಂದು ಲೋಕಸಭೆಯಲ್ಲಿ ಮಂಡಿಸಿತ್ತು. ಇದೀಗ, ಆ ಮಸೂದೆಯನ್ನು ಸರ್ಕಾರ ಹಿಂಪಡೆದಿದೆ. ಹೊಸ ಮಸೂದೆಯನ್ನು ರಚಿಸಲಾಗಿದ್ದು, ಅದನ್ನು ಸೋಮವಾರ ಮಂಡಿಸುವುದಾಗಿ ತಿಳಿಸಿದೆ.

ಫೆಬ್ರವರಿಯಲ್ಲಿ ಮಂಡಿಸಲಾಗಿದ್ದ ಮಸೂದೆಯ ಪರಿಶೀಲನೆಗೆ ಬಿಜೆಪಿ ಸಂಸದ ಬೈಜಯಂತ್ ಪಾಂಡಾ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರೂಪಿಸಲಾಗಿತ್ತು. ಆ ಸಮಿತಿಯು ಕೆಲವು ಶಿಫಾರಸುಗಳನ್ನು ಸೂಚಿಸಿದೆ. ಆ ಶಿಫಾರಸುಗಳನ್ನು ಒಳಗೊಂಡು ಹೊಸ ಮಸೂದೆಯನ್ನು ಹಣಕಾಸು ಸಚಿವಾಲಯವು ರೂಪಿಸಿದೆ. ಹೊಸ ಮಸೂದೆಯನ್ನು ಲೋಕಸಭೆಯಲ್ಲಿ ಸೋಮವಾರ ಮಂಡಿಸಲು ಸರ್ಕಾರ ನಿರ್ಧರಿಸಿದೆ.

‘ಆದಾಯ ತೆರಿಗೆ ಮಸೂದೆ-2025’ಯು ಕ್ರಿಪ್ಟೋ ಕರೆನ್ಸಿ ಮತ್ತು ಇತರ ಡಿಜಿಟಲ್ ಆಸ್ತಿಗಳನ್ನು ‘ವರ್ಚ್ಯುವಲ್ ಡಿಜಿಟಲ್ ಆಸ್ತಿಗಳು’ ಎಂದು ವರ್ಗೀಕರಿಸಿ, ಇವುಗಳ ಮೇಲಿನ ಆದಾಯವನ್ನು ತೆರಿಗೆ ವ್ಯಾಪ್ತಿಗೆ ತುರುವುದು, ತೆರಿಗೆ ರಿಯಾಯತಿ ಮಿತಿಯ ವಿಸ್ತರಣೆ, ಟಿಡಿಎಸ್‌ ಮತ್ತು ಟಿಸಿಎಸ್‌ ಮಿತಿಗಳಲ್ಲಿ ಹೆಚ್ಚಳ, ಐಟಿ ರಿಟರ್ನ್‌ ಗಡುವು ವಿಸ್ತರಣೆ ಸೇರಿದಂತೆ ಗಮನಾರ್ಹ ಬದಲಾವಣೆಗಳನ್ನು ತರಲು ಉದ್ದೇಶಿಸಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X