ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ನ್ಯೂ ಕೆಎಚ್‌ಬಿ ಕಾಲೋನಿಯ ಮಹಾಲೆ ಕಾಂಪ್ಲೆಕ್ಸ್‌ನಲ್ಲಿ ಬೆಳಗಿನ ಜಾವ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಓಂಕಾರ್ ಜೆರಾಕ್ಸ್ ಮತ್ತು ಪುಸ್ತಕದ ಅಂಗಡಿಗೆ ಬೆಂಕಿ ತಗುಲಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ಶಾರ್ಟ್ ಸರ್ಕ್ಯೂಟ್ ಅಥವಾ ಅಧಿಕ ವಿದ್ಯುತ್ ಪ್ರವಾಹದಿಂದ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಬೆಳಗಿನ ವಾಕಿಂಗ್‌ನಲ್ಲಿದ್ದ ಸಾರ್ವಜನಿಕರು ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.


ಓಂಕಾರ್ ಸ್ಟೋರ್ಸ್ ಮಾಲೀಕರಿಗೆ ಅಪಾರ ನಷ್ಟವಾಗಿದೆ ಎಂದು ತಿಳಿದುಬಂದಿದೆ. ಅಗ್ನಿ ಅವಘಡದಿಂದ ಅಂಗಡಿ ಪಕ್ಕದಲ್ಲಿದ್ದ ಬಟ್ಟೆ ಅಂಗಡಿ ಮತ್ತು ಬ್ಯೂಟಿ ಪಾರ್ಲರ್‌ಗೆ ಯಾವುದೇ ಹಾನಿಯಾಗಿಲ್ಲ.
ಇದನ್ನೂ ಓದಿ: ಉತ್ತರ ಕನ್ನಡ | ಮಳೆ ಕಾರಣದಿಂದ ನೀಡಿದ್ದ ರಜೆ ಸರಿದೂಗಿಸಲು ಶನಿವಾರ ಪೂರ್ಣಾವಧಿ ತರಗತಿ ನಡೆಸಲು ಆದೇಶ