ಕಲಬುರಗಿ | ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ದಾಳಿ ಖಂಡಿಸಿ ಸಿಎಂಗೆ ಪತ್ರ

Date:

Advertisements

ಧರ್ಮಸ್ಥಳದಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಅವರಿಂದ ಹೆಣಗಳನ್ನು ಹೂತು ಹಾಕಿಸಲಾಗಿದೆ ಎಂಬ ಆರೋಪಗಳ ಕುರಿತು ಎಸ್‌ಐಟಿ ನಡೆಸುತ್ತಿರುವ ತನಿಖೆಯ ವರದಿ ಮಾಡಲು ಸ್ಥಳಕ್ಕೆ ತೆರಳಿದ್ದ ಯೂಟ್ಯೂಬ್‌ ಚಾನೆಲ್‌ಗಳ ಸ್ವತಂತ್ರ ಪತ್ರಕರ್ತರ ಮೇಲಾದ ಹಲ್ಲೆಯನ್ನು ಜನವಾದಿ ಮಹಿಳಾ ಸಂಘಟನೆ, ಡಿವೈಎಫ್‌ಐ, ದಲಿತ ಹಕ್ಕುಗಳ ಸಮಿತಿಯನ್ನೊಳಗೊಂಡ ಪ್ರಗತಿಪರ ಸಂಘಟನೆಗಳ ಒಕ್ಕೂಟ ಖಂಡಿಸಿದೆ.

ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿಗಳ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ʼದಶಕಗಳಿಂದ ನಡೆದ‌ ಅತ್ಯಾಚಾರ, ದೌರ್ಜನ್ಯ, ಕೊಲೆ, ಸುಲಿಗೆಗಳಿಂದ ಜನರು ತತ್ತರಿಸಿ ಹೋಗಿದ್ದಾರೆ. ಸಾಕ್ಷಿ ಫಿರ್ಯಾದುದಾರರೊಬ್ಬರ ಹೇಳಿಕೆಯ ಮೇಲೆ ಉತ್ಕನನ ನಡೆಯುತ್ತಿದೆ. ಸತ್ಯ ಹೊರಬರುವ ಭಯದಿಂದ ಮಾಧ್ಯಮದವರ ಮೇಲೆ ನಡೆಸುವ ಹಲ್ಲೆ ದೌರ್ಜನ್ಯದಂತಹ ಕೃತ್ಯಗಳಿಗೆ ಮುಂದಾಗಿರುವುದರಲ್ಲಿ ಅನುಮಾನವೇ ಇಲ್ಲ. ಈ ಹಲ್ಲೆಯಲ್ಲಿ ನಾಲ್ವರು ಸ್ವತಂತ್ರ ಪತ್ರಕರ್ತರಿಗೆ ತೀವ್ರ ಗಾಯಗಳಾಗಿವೆ. ಇದೊಂದು ಎಲ್ಲರೂ ಖಂಡಿಸಬೇಕಾದ ಘಟನೆಯಾಗಿದೆʼ ಎಂದರು.

Advertisements

ʼಅಭಿವ್ಯಕ್ತಿ ಸ್ವಾತಂತ್ರ್ಯ ಮಾತ್ರವಲ್ಲ ಜೀವಹಾನಿಗೆ ಪ್ರಯತ್ನವೆಂದೇ ಹೇಳಬೇಕಾಗಿದೆ. ಇಂತಹ ಸಂದರ್ಭದಲ್ಲಿ ನ್ಯಾಯದ ಪರ, ಅಭಿವ್ಯಕ್ತಿ ಸ್ವಾತಂತ್ರ್ಯದ ಪರ, ಬದುಕುವ ಹಕ್ಕಿನ ಪರ ಮತ್ತು ಅತ್ಯಾಚಾರ, ದೌರ್ಜನ್ಯಕ್ಕೆ, ಕೊಲೆಗೆ ಒಳಗಾದವರ ಪರ ನಿಲ್ಲಬೇಕಾದದ್ದು ಮನುಷ್ಯರಾದವರ ಕರ್ತವ್ಯವವಾಗಿದೆ. ರಾಜ್ಯ ಸರ್ಕಾರ ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ‌ಪರಿಗಣಿಸಿ ತಕ್ಷಣವೇ ಕ್ರಮಕ್ಕೆ ಮುಂದಾಗಬೇಕುʼ ಎಂದು ಒತ್ತಾಯಿಸಿದ್ದಾರೆ.

ʼಪದ್ಮಲತಾ‌, ವೇದವಲ್ಲಿ, ಸೌಜನ್ಯ ಮತ್ತು ಇತರ ಎಲ್ಲ‌ ನ್ಯಾಯಕ್ಕಾಗಿ‌ ಕಾದಿರುವ ಸಾವುಗಳ ಸಮಗ್ರ ತನಿಖೆಯನ್ನು ಮಾಡಬೇಕು. ದಮನಿತರಿಗಾಗಿ ಮೀಸಲಿಟ್ಟ ಭೂಮಿಯ ಬಗ್ಗೆ, ಭೂಮಿಗಾಗಿ ಅಮಾಯಕರ ಹತ್ಯೆ, ಅನೇಕರಿಗೆ ಹಿಂಸೆ ಮತ್ತು ಬಹಳಷ್ಟು ಜನರಿಗೆ ಬೆದರಿಸಿ ಓಡಿಸಿದ ಎಲ್ಲ ಪ್ರಕರಣಗಳೂ ಎಸ್‌ಐಟಿ ತನಿಖೆ ನಡೆಸಬೇಕುʼ ಎಂದು ಆಗ್ರಹಿಸಿದರು.

ಇದನ್ನೂ ಓದಿ : ಬೀದರ್‌ | ಆದಿಜಾಂಬವ ಅಭಿವೃದ್ದಿ ನಿಗಮಕ್ಕೆ ₹100 ಕೋಟಿ ಅನುದಾನ ಕೊಡಿ

ಸಮಿತಿಯ ಪ್ರಮುಖರಾದ ಚಂದಮ್ಮ ಗೋಳಾ, ವಿದ್ಯಾ, ಸರ್ವೇಶ, ಲವಿತ್ರ ವಸ್ತ್ರದ, ಸುಜಾತಾ, ಪ್ರೇಮ, ಪಾಂಡುರಂಗ ಮಾವಿನಕರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X