ದೇವಾಲಯದ ಗರ್ಭಗುಡಿಗೆ ಬಲವಂತವಾಗಿ ಪ್ರವೇಶಿಸಿದ್ದಾರೆ. ಆ ಮೂಲಕ ಧಾರ್ಮಿಕ ಭಾವನೆಗಳಿಗೆ ಘಾಸಿಗೊಳಿಸಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರು ಬಿಜೆಪಿ ಸಂಸದರ ವಿರುದ್ಧ ಪ್ರರಕಣ ದಾಖಲಾಗಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.
ಬಿಜೆಪಿಯೇ ಅಧಿಕಾರದಲ್ಲಿರುವ ಜಾರ್ಖಂಡ್‌ನ ದೇವಗಢದಲ್ಲಿ ಘಟನೆ ನಡೆದಿದೆ. ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ ಮತ್ತು ಮನೋಜ್ ತಿವಾರಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಇಬ್ಬರೂ ಸಂಸದರು ಆಗಸ್ಟ್ 2ರಂದು ದೇವಗಢದ ಬಾಬಾ ಬೈದನಾಥ್ ದೇವಾಲಯದ ಗರ್ಭಗುಡಿಗೆ ಬಲವಂತವಾಗಿ ಪ್ರವೇಶಿಸಿದ್ದರು. ಅವರು ಧಾರ್ಮಿಕ ಕಟ್ಟುಪಾಡುಗಳನ್ನು ಮೀರಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ.
ದೇವಾಲಯದ ಅರ್ಚಕ ಕಾರ್ತಿಕ್ ನಾಥ್ ಠಾಕೂರ್ ಎಂಬವರು ಸಂಸದರ ವಿರುದ್ಧ ದೂರು ನೀಡಿದ್ದಾರೆ. ದೂರಿನಲ್ಲಿ; “ಶ್ರಾವಣ ಮಾಸದಲ್ಲಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಬರುತ್ತಾರೆ. ಹೀಗಾಗಿ, ವಿಐಪಿ ಮತ್ತು ವಿವಿಐಪಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಹೀಗಿದ್ದರೂ, ಬಿಜೆಪಿ ಸಂಸದರು ಆಗಸ್ಟ್ 2ರಂದು ರಾತ್ರಿ 8.45 ರಿಂದ 9 ಗಂಟೆಯ ನಡುವೆ ಬಲವಂತವಾಗಿ ದೇವಾಲಯದ ಗರ್ಭಗುಡಿಗೆ ಪ್ರವೇಶಿಸಿದ್ದಾರೆ” ಎಂದು ಆರೋಪಿಸಿದ್ದಾರೆ.
ನೀಡಿದ ದೂರಿ ಆಧಾರದ ಮೇಲೆ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಬಾಬಾ ಬೈದ್ಯನಾಥ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.