ಮುಂಡಗೋಡ | ರಕ್ಷಾಬಂಧನ ಆಚರಿಸಿದ ನರೇಗಾ ಕೂಲಿ ಕಾರ್ಮಿಕರು

Date:

Advertisements

ಮಹಿಳೆಯರ ಘನತೆ ಎತ್ತಿ ಹಿಡಿಯುವ ಮತ್ತು ಅವರಿಗೆ ಸದಾ ಗೌರವ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ಸಂಕಲ್ಪ ಮಾಡುವ ರಕ್ಷಾಬಂಧನ ಹಬ್ಬವನ್ನು ಮುಂಡಗೋಡ ತಾಲೂಕಿನ ನರೇಗಾ ಕೂಲಿ ಕಾರ್ಮಿಕರು ಆಚರಿಸಿದ್ದಾರೆ.

ಮುಂಡಗೋಡು ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ. ದಾಸನಕೊಪ್ಪ ಅವರ ನೇತೃತ್ವದಲ್ಲಿ ಶುಕ್ರವಾರದಂದು ಮಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೆರೆ ಪುನಶ್ಚೇತನ ಕಾಮಗಾರಿ ಸ್ಥಳದಲ್ಲಿ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮತ್ತು ಎಲ್.ವಿ.ಕೆ ಸಂಸ್ಥೆಯ ಸಹಯೋಗದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಉದ್ಯೋಗ ಖಾತರಿಯಡಿ ಹೆಚ್ಚಿನ ಶ್ರಮ ಬೇಡುವ ಮತ್ತು ಗ್ರಾಮದಿಂದ ಸಾಕಷ್ಟು ದೂರದಲ್ಲಿರುವ ಕೆರೆ ಪುನಶ್ಚೇತನ, ಅರಣ್ಯದಲ್ಲಿ ಟ್ರೆಂಚ್ ನಿರ್ಮಾಣದಂತಹ ಮುಂತಾದ ಕಾಮಗಾರಿಗಳಲ್ಲಿ ಮಹಿಳೆಯರು ಕೆಲಸ ಮಾಡುವುದು ಕಷ್ಟ. ಅಂತಹ ಸಂದರ್ಭಗಳಲ್ಲಿ ಪುರುಷರು ಕೆಲಸದಲ್ಲಿ ನೆರವಾಗುವುದು ಮಾತ್ರವಲ್ಲದೇ, ಅವರು ಮನೆಯಿಂದ ಹೊರಟು ಮತ್ತೆ ಸುರಕ್ಷಿತವಾಗಿ ಮನೆ ಸೇರುವವರೆಗೂ ವಿಶೇಷ ಕಾಳಜಿ ವಹಿಸುತ್ತಾರೆ. ಕೂಡು ಕುಟುಂಬದಂತೆ ಆಸರ-ಬೇಸರಕ್ಕೆ ಜೊತೆಯಾಗಿರುತ್ತಾರೆ. ಹೀಗಾಗಿ ಇಂತಹ ವಿಶಿಷ್ಟ್ಟ ಬಾಂಧವ್ಯವನ್ನು ಇನ್ನೂ ಗಟ್ಟಿಗೊಳಿಸುವ ನಿಟ್ಟಿನಲ್ಲಿ ತಾಲೂಕಿನ ಹಲವು ಕಾಮಗಾರಿ ಸ್ಥಳಗಳಲ್ಲಿ ಮುಂಡಗೋಡ ತಾಲೂಕು ಪಂಚಾಯತಿಯ ವತಿಯಿಂದ ರಕ್ಷಾ ಬಂಧನ ಹಬ್ಬ ಆಚರಿಸಲಾಗುತ್ತಿದೆ ದಾಸನಕೊಪ್ಪ ತಿಳಿಸಿದರು.

Advertisements

ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ (ಗ್ರಾ.ಉ) ಸೋಮಲಿಂಗಪ್ಪ ಛಬ್ಬಿ ಅವರು ಮಾತನಾಡಿ, “ಯೋಜನೆಯಡಿ ಗಂಡು ಮತ್ತು ಹೆಣ್ಣಿಗೆ ಸಮಾನ ಕೆಲಸಕ್ಕೆ ಸಮಾನ ವೇತನವಿದೆ. ಕಾಮಗಾರಿ ಸ್ಥಳದಲ್ಲಿ ಪರಸ್ಪರ ಸೌಹಾರ್ದತೆಯಿಂದ, ಸಹೋದರಿಯರಿಗೆ ಸಹೋದರರಂತೆ ಆಸರೆಯಾಗಿ, ಅವರನ್ನು ಸಮಾಜದ ಸರಿಸಮಾನವಾಗಿ ಬೆಳೆಸಲು ಕೈಜೋಡಿಸೋಣ. ಮಹಿಳಾ ಸ್ನೇಹಿ ಕಾಮಗಾರಿ ಸ್ಥಳವನ್ನಾಗಿಸೋಣ” ಎಂದರು.

WhatsApp Image 2025 08 08 at 6.10.29 PM

ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ ಕೂಲಿಕಾರರಿಗೆ ಯೋಜನೆಯಡಿ ಗ್ರಾಮೀಣ ಭಾಗದ ಜನರಿಗೆ ಇರುವ ಉದ್ಯೋಗ ಅವಕಾಶ, ಕೂಲಿ ಮೊತ್ತ, ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿ ಸೌಲಭ್ಯಗಳು, ಅರ್ಜಿ ಸಲ್ಲಿಸುವ ವಿಧಾನ, ಗರ್ಭಿಣಿ ಮಹಿಳೆಯರು, ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿಗೆ ಕೆಲಸದಲ್ಲಿನ ರಿಯಾಯಿತಿ, ಕೂಸಿನ ಮನೆ ಸೇರಿದಂತೆ ಹಲವು ಉಪಯುಕ್ತ ಮಾಹಿತಿಯನ್ನು ತಿಳಿಸಿದರು.

ಇದನ್ನೂ ಓದಿ: ಉತ್ತರ ಕನ್ನಡ | ಕುಮಟಾ ಉಪವಿಭಾಗದ ಸಹಾಯಕ ಆಯುಕ್ತರಾಗಿ ಪಿ ಶ್ರವಣ್ ಕುಮಾರ್ ನೇಮಕ

ರಕ್ಷಾ ಬಂಧನ ಹಬ್ಬದ ಪ್ರಯುಕ್ತ ಪುರುಷ ಕೂಲಿಕಾರರಿಗೆ ಸಹೋದರಿ ಸಮಾನರಾದ ಮಹಿಳಾ ಕೂಲಿಕಾರರು ಪವಿತ್ರ ರಾಖಿಯನ್ನು ಕಟ್ಟಿ, ಸಿಹಿ ತಿನಿಸಿ, ಆರತಿ ಬೆಳಗಿ ಮನಸಾರೆ ಹಾರೈಸಿದರು. ಮತ್ತು ಎಲ್ಲ ಪುರುಷರು ಅವರ ರಕ್ಷಣೆಗೆ ಸದಾ ನಿಲ್ಲುವುದಾಗಿ ಸಂಕಲ್ಪ ತೊಟ್ಟರು.

ಈ ಸಂದರ್ಭದಲ್ಲಿ ಮಳಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಜಯಶ್ರೀ ಹಜಾರೆ, ಊರ ಪ್ರಮುಖರಾದ ನಾಗೇಂದ್ರ ಕರಗಸಕರ, ಬಿಎಫ್‌ಟಿ ಹನುಮಂತ ಇಡಗೋಡ, ಮಂಜು ಪೂಜಾರ, ಸಂತೋಷ ಹಿರೇಮಠ, ಎಲ್‌ವಿಕೆ ಸಿಬ್ಬಂದಿ ಶ್ರೀದೇವಿ ಭದ್ರಾಪುರ, ಕಾಯಕ ಬಂಧು ರೇಣುಕಾ ಚಲವಾದಿ, ಮನರೇಗಾ ಕೂಲಿಕಾರರು ಹಾಗೂ ಗ್ರಾಪಂ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X