ವಿಜಯಪುರ | ಇಂಡಿ ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೆ: ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ

Date:

Advertisements

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕಾಗಿ ಯಶವಂತರಾಯ ಗೌಡ ಪಾಟೀಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಗೆ ಪುರಸಭೆ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೇದ್ ಮೂವಿ ಹೇಳಿದರು.

ಹಿಂದಿ ಪುರಸಭೆಯು ನಗರಸಭೆಯಾಗಿ ಮೇಲ್ದರ್ಜೆಗೇರಿರುವುದನ್ನು ಸ್ವಾಗತಿಸಿ ಕಾಂಗ್ರೆಸ್ ಕಾರ್ಯಕರ್ತರು ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಇಂಡಿ ಇತಿಹಾಸದಲ್ಲೇ ಸುವರ್ಣ ಅಕ್ಷರಗಳಲ್ಲಿ ಬರೆದಿಡಬಹುದಾದ ಈ ದಿನ. ಶಾಸಕರ ಸತತ ಪರಿಶ್ರಮ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಹಕಾರದಿಂದ ಇದು ಸಾಧ್ಯವಾಗಿದೆ. ಇದುವರೆಗೂ ಪಟ್ಟಣ ಎಂದು ಕರೆಸಿಕೊಳ್ಳುತ್ತಿದ್ದ ಹಿಂಡಿ ಇಂದಿನಿಂದ ನಗರವಾಗಿದೆ ಎಂದರು.

Advertisements

ಇಂಡಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಶಾಂತ್ ಕಾಳೆ ಮಾತನಾಡಿ, ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಶಾಸಕರ ಅಭಿವೃದ್ಧಿಯನ್ನು ಪ್ರಶ್ನಿಸಿರುವ ವಿರೋಧ ಪಕ್ಷದವರಿಗೆ ಇದು ಎಚ್ಚರಿಕೆಯ ಗಂಟೆಯಾಗಿದೆ ಎಂದರು.

ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ಶಾಸಕರು ಎರಡು ಮೂರು ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಪುರಸಭೆ ಸಾಮಾನ್ಯ ಸಭೆಗಳಲ್ಲಿ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಶಾಸಕರಾದ ಯಶವಂತರಾಯ ಗೌಡ ಪಾಟೀಲ್ ಅವರು ತಮ್ಮ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಪುರಸಭೆ ಅಧ್ಯಕ್ಷ ಲಿಂಬಾಜಿ ರಾಥೋಡ್ ಮಾತನಾಡಿ, 2011ರ ಜನಸಂಖ್ಯೆಯಂತೆ ಪಟ್ಟಣದಲ್ಲಿ 38217 ಜನಸಂಖ್ಯೆ ಇತ್ತು. ಈಗ 59,32 ದಾಟಿದೆ. 27.38 ಚದರ ಕಿಲೋಮೀಟರ್ ಪ್ರದೇಶ ಹೊಂದಿದ್ದು, ವರಮಾನ, ಜನಸಂಖ್ಯೆ ಸೇರಿ ಹಲವು ಅಂಶಗಳನ್ನು ಪರಿಗಣಿಸಿ ಸರ್ಕಾರ ಮೇಲ್ದರ್ಜೆಗೇರಿಸಲು ನಿರ್ಧರಿಸಿದೆ. ಇದಕ್ಕೆ ಪ್ರಯತ್ನಿಸಿದ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರಿಗೆ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದರು.

ಇದನ್ನು ಓದಿದ್ದೀರಾ? ಬೆಳಗಾವಿ | ಧರ್ಮಾಂದತೆಯ ‘ದ್ವೇಷ’ದ ವಿಷವನ್ನು ಸೋಲಿಸಿದ ಮುಸ್ಲಿಮ್ ಶಿಕ್ಷಕನ ‘ಪ್ರೀತಿ’

ಸಂಭ್ರಮಾಚರಣೆಯಲ್ಲಿ ಪುರಸಭೆ ಉಪಾಧ್ಯಕ್ಷ ಜಹಂಗೀರ್ ಸೌದಾಗಾರ, ಭೀಮಾಶಂಕರ ಮೊರಮನ, ಜಟ್ಟಪ್ಪ ರವಳಿ, ಭೀಮಣ್ಣ ಕವಲಗಿ,ಸದಾಶಿವ ಪ್ಯಾಟಿ,ಶಬ್ಬೀರ್ ಕಾಜಿ, ಅಸ್ಲಾಮ ಕಾಲೋನಿ,ಶ್ರೀಕಾಂತ ಗುಡಿಗನೂರು,ಅನಿಲ ಗೌಡ ಬಿರಾದಾರ, ಸಂತೋಷ ಪರಸನವರ,ಶ್ರೀಶೈಲ ಪೂಜಾರಿ ಸುಧೀರ್ ಕರೆಕಟ್ಟಿ, ಆಯುಬ್ ಭಾಗವಾನ, ಲಕ್ಕಪ್ಪ ಪೂಜಾರಿ, ಗಣೇಶ ಕುಂಬಾರ, ಮಹೇಶ ಕುಂಬಾರ,ಸುಭಾಷ್ ಪಾಲ್ಗೊಂಡಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X