ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಮೂರು ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಅನಿತಾ ನೀಲದಕರ್ (25) ಎಂದು ಗುರುತಿಸಲಾಗಿದ್ದು, ಈ ಸಂಬಂಧ ಪತಿ ನೀಲೇಶ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಫಿಝಾ ಹಟ್‌ನಲ್ಲಿ ಕೆಲಸ ಮಾಡುತ್ತಿದ್ದ ಅನಿತಾ ಹಾಗೂ ನೀಲೇಶ್ ಪರಸ್ಪರ ಪ್ರೀತಿಸಿ ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದರು. ಇಂದು ಬೆಳಗ್ಗೆ ಅನಿತಾರ ಮೃತದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆ ಎಂದು ಶಂಕಿಸಿರುವ ಅನಿತಾರ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸುದ್ದಿ ಓದಿದ್ದಿರಾ ? ಧರ್ಮಾಂದತೆಯ ‘ದ್ವೇಷ’ದ ವಿಷವನ್ನು ಸೋಲಿಸಿದ ಮುಸ್ಲಿಮ್ ಶಿಕ್ಷಕನ ‘ಪ್ರೀತಿ’*
ಬೆಳಗಾವಿ ಗ್ರಾಮೀಣ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ನೀಲೇಶ್ ವಿಚಾರಣೆ ಮುಂದುವರಿಸಿದ್ದಾರೆ.