ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

Date:

Advertisements

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ ದಾವಣಗೆರೆ ವಿಶ್ವವಿದ್ಯಾನಿಲಯ ಗ್ರಂಥಾಲಯ ವಿಭಾಗದ ವತಿಯಿಂದ 2025, ಆಗಸ್ಟ್ 12 ಮಂಗಳವಾರ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.

ವಿಶ್ವವಿದ್ಯಾನಿಲಯದ ಎಂಬಿಎ ಸಭಾಂಗಣದಲ್ಲಿ “ಕೃತಕ ಬುದ್ಧಿಮತ್ತೆ ಯುಗದಲ್ಲಿ ತಂತ್ರಜ್ಞಾನ ರೂಪಾಂತರದ ಮೂಲಕ ಗ್ರಂಥಾಲಯ ಸುಸ್ಥಿರ ಅಭಿವೃದ್ಧಿ ಹಾಗೂ ಸಮಸ್ಯೆಗಳು, ಸವಾಲುಗಳು ಮತ್ತು ಅವಕಾಶಗಳು” ಕುರಿತು ನೆಡೆಯುವ ಕಾರ್ಯಾಗಾರವನ್ನು ಚೆನ್ನೈನ ಮದ್ರಾಸ್ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಬಿ.ರಮೇಶ ಬಾಬು ಉದ್ಘಾಟಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭದ್ರಾ ಬಲದಂಡೆ ನಾಲೆಯಿಂದ ಕುಡಿಯುವ ನೀರಿನ ಯೋಜನೆ; ಕಾಂಗ್ರೆಸ್ ನಿಂದು ಯೋಜನೆಯ ಸತ್ಯ ಶೋಧನಾ ಸಮಾವೇಶ

Advertisements

ಕುಲಪತಿ ಪ್ರೊ.ಬಿ.ಡಿ.ಕುಂಬಾರ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ಬಸವ ಅಂತರರಾಷ್ಟ್ರೀಯ ಕೇಂದ್ರದ ನಿರ್ದೇಶಕ ಡಾ. ಮುತ್ತಯ್ಯ ಕೋಗನೂರಮಠ, ತಿರುಪತಿ ಶ್ರೀ ವೆಂಕಟೇಶ್ವರ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ಡಿ.ಚಂದ್ರನ್, ತುಮಕೂರು ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ.ಬಿ.ಟಿ.ಸಂಪತ್‍ಕುಮಾರ್ ಅತಿಥಿಗಳಾಗಿ ಭಾಗವಹಿಸುವರು. ಕುಲಸಚಿವರಾದ ಎಸ್.ಬಿ.ಗಂಟಿ, ಪ್ರೊ.ಸಿ.ಕೆ.ರಮೇಶ್, ಹಣಕಾಸು ಅಧಿಕಾರಿ ದ್ಯಾಮನಗೌಡ ಮುದ್ದನಗೌಡ್ರ ಉಪಸ್ಥಿತರಿರುವರು ಎಂದು ಕಾರ್ಯಕ್ರಮ ಸಂಯೋಜಕರಾದ ಡಾ. ಜಿ.ನೀಲಮ್ಮ ಮತ್ತು ಡಾ.ಸಿ.ನಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ದಾವಣಗೆರೆ | ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬ ಸಾಂಪ್ರದಾಯಿಕ, ಸೌಹಾರ್ಧತೆಯಿಂದ ಆಚರಿಸಿ; ಡಿಸಿ ಜಿ.ಎಂ.ಗಂಗಾಧರಸ್ವಾಮಿ

"ಕಲೆ ಸಾಂಸ್ಕೃತಿಕತೆಗೆ ಹೆಸರುವಾಸಿಯಾದ ದೇಶದಲ್ಲಿ ಪರಿಸರ ಸ್ನೇಹಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪರಿಸರ...

Download Eedina App Android / iOS

X