ಗುಬ್ಬಿ | ಹಳೆ ವಿದ್ಯಾರ್ಥಿಗಳಿಂದ ನಿರ್ಮಿಸಿದ್ದ ಸೈಕಲ್ ಸ್ಟ್ಯಾಂಡ್ ಉದ್ಘಾಟನೆ

Date:

Advertisements

 ಓದಿದ ಶಾಲೆ ಹಾಗೂ ಗ್ರಾಮವನ್ನು ಮರೆಯದೆ ಋಣ ತೀರಿಸುವಲ್ಲಿ ಹಳೆ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕೆಪಿಎಸ್ ಶಾಲೆಯ ಪ್ರಾಂಶುಪಾಲ ಡಾ. ವೆಂಕಟಾಚಲಯ್ಯ ತಿಳಿಸಿದರು.

ಗುಬ್ಬಿ ತಾಲೂಕಿನ ಸಿಎಸ್ ಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಹಳೆ ವಿದ್ಯಾರ್ಥಿಗಳಿಂದ ನೂತನವಾಗಿ ನಿರ್ಮಿಸಿದ್ದ ಸೈಕಲ್ ಸ್ಟ್ಯಾಂಡ್,  ಶಾಲಾ ಕಟ್ಟಡ, ಶುದ್ದ ನೀರಿನ ಘಟಕ, ನೂತನ ಶಾಲಾ ಕೊಠಡಿ ಉದ್ಘಾಟನೆ ಹಾಗೂ ಭೋಜನಾಲಯ ಮತ್ತು ಸಭಾಂಗಣ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಹಳೆಯ ವಿದ್ಯಾರ್ಥಿಗಳ ನಿರಂತರ ಯಶಸ್ಸು ಮತ್ತು ಬೆಳವಣಿಗೆಗೆ ಜೀವನಪರ್ಯಂತ ಕಲಿಕೆ ಅತ್ಯಗತ್ಯ. ಗ್ರಾಮದಲ್ಲಿ ಇಂತಹ ಸಂಘಟನೆಗಳು ಗಟ್ಟಿಯಾದರೆ ಗ್ರಾಮ ಅಭಿವೃದ್ಧಿಯಾಗುವುದರಲ್ಲಿ ಸಂಶಯವಿಲ್ಲ ಎಂದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ.ಸಿ.ಎನ್. ಮಾತನಾಡಿ, ಸುಮಾರು 18 ಲಕ್ಷದ ವೆಚ್ಚದ ಕಾಮಗಾರಿ ಯಾಗಿದ್ದು, ಈ ಕಾಮಗಾರಿಯನ್ನು ತ್ವರಿತವಾಗಿ ಮುಗಿಸುತ್ತೇವೆ. ಶಾಲೆಯ ಅಭಿವೃದ್ಧಿಗೆ ಹಾಗೂ ಮಕ್ಕಳ ಕಲಿಕೆಗೆ ಬೇಕಾದ ಪೂರಕ ಕೆಲಸ ಮಾಡಲು ಕೆಪಿಎಸ್ ಶಾಲೆಯ ಹಳೆಯ ವಿದ್ಯಾರ್ಥಿಗಳು ಶ್ರಮಿಸಲು ಸದಾ ಸಿದ್ದ ಎಂದರು.

Advertisements

ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಗೋವಿಂದರಾಜು, ಮುಖ್ಯ ಶಿಕ್ಷಕಿ ಬಿ. ಹೆಚ್.ಗಂಗಮ್ಮ, ಎಸ್ ಡಿ ಎಂ ಸಿ ಅಧ್ಯಕ್ಷ ಗೋಪಾಲಕೃಷ್ಣ, ಹಳೆಯ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷ ಎಂ. ಡಿ. ನಯಾಜ್, ಉಪಾಧ್ಯಕ್ಷ ಕೆಂಪರಾಜು, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಕಾರ್ಯಾಧ್ಯಕ್ಷರಾದ ಕೃಷ್ಣಮೂರ್ತಿ,ಎಸ್ ಡಿ ಎಂ ಸಿ ಸದಸ್ಯರು, ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಪೋಷಕರುಗಳು ಶಾಲಾ ಕಾಲೇಜಿನ ಬೋಧಕರು ಹಾಗೂ ಬೋಧಕೇತರರು ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X