ಅಕ್ರಮವಾಗಿ ರಸಗೊಬ್ಬರವನ್ನು ಸಾಗಿಸುತ್ತಿದ್ದಾಗ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲ್ಲೂಕು ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದೇವಗೋಡು ಸುಭಾಸ್ ನಗರದ ವಿರ್ಲ್ಪೆರ್ಡ್ (40) ಯಾವುದೇ ಅನುಮತಿ ಇಲ್ಲದೆ ತನ್ನ ಮನೆಯಲ್ಲಿ ಅಕ್ರಮವಾಗಿ ಯೂರಿಯಾ ರಸಗೊಬ್ಬರವನ್ನು ಇಟ್ಟುಕೊಂಡು 300 ಮೂಟೆ ರಸ ಗೊಬ್ಬರವನ್ನು ಲಾರಿಗೆ ಲೋಡ್ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಲಾರಿಯನ್ನು ವಶ ಪಡಿಸಿಕೊಂಡಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಗ್ರಾಪಂ ವ್ಯಾಪ್ತಿಯಲ್ಲಿ ನಿರೀಕ್ಷೆಗೂ ಮೀರಿ ಅಭಿವೃದ್ಧಿ: ಗ್ರಾಪಂ ಅಧ್ಯಕ್ಷ ಕರುಣಾಕರ
ಬಾಳೆಹೊನ್ನೂರು ಪೊಲೀಸ್ ಠಾಣೆಯ ಪಿಎಸ್ ಐ ರವೀಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ, ಲಾರಿಯಲ್ಲಿದ್ದ 220 ಮೂಟೆ ಮತ್ತು ಮನೆಯಲ್ಲಿದ್ದ 80 ಮೂಟೆ ಒಟ್ಟು 300 ಮೂಟೆ ಯೂರಿಯಾ ರಸಗೊಬ್ಬರವನ್ನು ಕೃಷಿ ಅಧಿಕಾರಿಗಳ ಸಮ್ಮುಖದಲ್ಲಿ ವಶಕ್ಕೆ ಪಡಿಸಿಕೊಳ್ಳಲಾಗಿದೆ