ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಆರ್‌ಟಿಓ ಅಧೀಕ್ಷಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ನಗರದ ರಿಂಗ್ ರೋಡ್‌ನ ನವೋದಯ ಶಾಲೆ ಎದುರು ನಡೆದಿದೆ.
ಮೃತ ವ್ಯಕ್ತಿ ಆರ್‌ಟಿಓ ಕಚೇರಿಯ ಅಧೀಕ್ಷಕರಾಗಿದ್ದ ತಿಪ್ಪೇಸ್ವಾಮಿ (43), ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿ ಶಿವನಿ ನಿವಾಸಿ, ದಾವಣಗೆರೆ ನಗರದ ರಿಂಗ್ ರೋಡ್ ಬಳಿ ತಿಪ್ಪೇಸ್ವಾಮಿ ಅವರು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತಿಪ್ಪೇಸ್ವಾಮಿ ಅವರು ರಸ್ತೆಗೆ ಬಿದ್ದಿದ್ದರು. ಅವರು ಹೆಲ್ಮೆಟ್ ಧರಿಸಿದ್ದರೂ ಬಸ್‌ನ ಟೈಯರ್ ಅವರ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಅಕ್ರಮ ರಸಗೊಬ್ಬರ ಮಾರಾಟ: ಲಾರಿ ವಶಕ್ಕೆ ಪಡೆದ ಅಧಿಕಾರಿಗಳು
ಈ ಕುರಿತು ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.