ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆ: ಕಾಂಗ್ರೆಸ್ ಕಾರ್ಯಕರ್ತರ ಸಭೆ

Date:

Advertisements

ಸುಳ್ಳು ಹೇಳಿಕೊಂಡೇ ಜನತೆಯನ್ನು ಯಾಮಾರಿಸುವ ಜೆಡಿಎಸ್, ಬಿಜೆಪಿ ಮತ್ತು ವರ್ತೂರ್ ಪಕ್ಷಗಳನ್ನು ಯಾವುದೇ ಕಾರಣಕ್ಕೂ ನಂಬಬಾರದು. ಚುನಾವಣೆಯ ಪೂರ್ವದಲ್ಲಿ ಹೇಳಿದಂತೆ ಮಾಡುವ, ಮಾಡಿದಂತೆ ಹೇಳುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.

ಕೋಲಾರ ತಾಲೂಕಿನ ವೇಮಗಲ್‌ನಲ್ಲಿ ಶನಿವಾರ ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

“ರಾಜ್ಯದ ಜನತೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಕ್ಕೆ ಅಧಿಕಾರ ಕೊಟ್ಟಾಗ ಅಭಿವೃದ್ಧಿಗೆ ಒತ್ತು ನೀಡದೆ ಜಾತಿ ಧರ್ಮಗಳ ಮಧ್ಯೆ ಗಲಾಟೆಗಳಿಗೆ ಸೀಮಿತವಾಗಿತ್ತು. ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಟ್ಟಾಗ ಹಾಳುಮಾಡದೆ ಮನೆ ಮನೆಗೆ ಸೌಲಭ್ಯ ಒದಗಿಸಿದೆ. ಕಾಂಗ್ರೆಸ್ ಪಕ್ಷವು ಬಡವರ ದಲಿತರ ಮಹಿಳೆಯರ ಪರವಾಗಿದ್ದು, ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ನಿಮ್ಮೆಲ್ಲರ ಆಶೀರ್ವಾವು ಕಾಂಗ್ರೆಸ್ ಪಕ್ಷದ ಮೇಲೆ ಇರಬೇಕಾಗಿದೆ” ಎಂದರು.

Advertisements

“ಕೋಲಾರ ಜಿಲ್ಲೆಯಲ್ಲಿ ಈಗಾಗಲೇ ಮಾದರಿ ಜಿಲ್ಲೆಯಾಗುವಂತೆ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ವೇಮಗಲ್ ಭಾಗದಲ್ಲಿ ನಗರಾಭಿವೃದ್ಧಿ ಇಲಾಖೆಯಿಂದ ಐದು ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಮೆಡಿಕಲ್ ಕಾಲೇಜು, ಎಪಿಎಂಸಿಗೆ ನೂರು ಎಕರೆ ಜಾಗ, ರಿಂಗ್ ರಸ್ತೆ, ಮೂರು ಸಾವಿರ ವೆಚ್ಚದ ರಸ್ತೆ ಸೇರಿದಂತೆ ಅಭಿವೃದ್ಧಿಗೆ ಕೆಲಸ ಪ್ರಾರಂಭವಾಗಿದೆ ಮುಂದೆಯೂ ಸಹ ವೇಮಗಲ್ ತಾಲೂಕು ಕೇಂದ್ರವಾಗಿ ಮಾಡಲಾಗುತ್ತದೆ ನಿಮ್ಮ ಋಣ ನಮ್ಮ ಮೇಲಿದೆ ಅದನ್ನು ತೀರಿಸುವುದು ಕೂಡ ಕಾಂಗ್ರೆಸ್ ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.

ಕಂದಾಯ ಸಚಿವ ಸಿ ಬಿ‌ ಕೃಷ್ಣಬೈರೇಗೌಡ ಮಾತನಾಡಿ, “ಈ ಭಾಗದಲ್ಲಿ ಹುಟ್ಟಿ ಬೆಳೆದಿರುವುದರಿಂದ ಜನರ ಋಣದಲ್ಲಿ ನಾನು ಇದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವ, ಶಾಸಕ, ಎಂಎಲ್‌ಸಿ ಕಾಂಗ್ರೆಸ್‌ನವರೇ ಇದ್ದಾರೆ. ಪಟ್ಟಣ ಪಂಚಾಯಿತಿಯಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಭಿವೃದ್ಧಿಗೆ ಪೂರಕವಾಗಲಿದೆ. ಮೊದಲ ಹಂತದಲ್ಲಿ ಕೈಗಾರಿಕೆ ಸ್ಥಾಪನೆಯಾದ ಬಳಿಕ ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೇರಿತು. ಮೊದಲ ಚುನಾವಣೆಯಲ್ಲಿ ವ್ಯವಸ್ಥಿತವಾಗಿ ಬೆಳೆಸಬೇಕು” ಎಂದು ಉದ್ದೇಶದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾಗಿದೆ” ಎಂದರು.

“ಈ ಭಾಗದಲ್ಲಿ ಈಗಾಗಲೇ ಯೋಜನಾ ಪ್ರಾಧಿಕಾರ ಘೋಷಣೆ ಮಾಡಿದೆ. ಎಚ್ ಕ್ರಾಸ್, ವೇಮಗಲ್ ನರಾಸಪುರ ಮಾಲೂರು, ಕೋಲಾರ ಹೆದ್ದಾರಿ ಅಭಿವೃದ್ಧಿಗೆ ಟೆಂಡರ್ ಕರೆಯಲಾಗಿದೆ. ಇದಕ್ಕೆ ₹3,200 ಕೋಟಿಯನ್ನು ಸರ್ಕಾರ ಮೀಸಲಿರಿಸಿದೆ. ಇದು ವಾಣಿಜ್ಯ ಅಭಿವೃದ್ಧಿಗೆ ಸಹಕಾರವಾಗುತ್ತದೆ. ಸ್ಥಳೀಯ ಜನ ಗಂಭೀರವಾಗಿ ಅಲೋಚನೆ ಮಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಅಧಿಕಾರಕ್ಕೆ ತರಬೇಕು. ಬಡವರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ನಿಟ್ಟಿನಲ್ಲಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ” ಎಂದರು.

“ಈ ಭಾಗದಲ್ಲಿ ನಮ್ಮ ತಂದೆಯವರ ಕಾಲದಿಂದ ನಮಗೆ ಶಕ್ತಿ ತುಂಬಿದ್ದಾರೆ. ಇಲ್ಲಿ ಹಕ್ಕುಪತ್ರ ವಿತರಣೆ ಮಾಡಿರುವವರಿಗೆ ಪಕ್ಕ ಖಾತೆ ಮಾಡದೆ ಇದ್ದು, ಮಾಡಿಸಿಕೊಡಲು ಜವಾಬ್ದಾರಿ ನೀಡಲಾಗಿದೆ, ಅದನ್ನು ಈಡೇರಿಸಲಾಗುವುದು. ಕಾನೂನು ತೊಡಲು ಬಾರದಂತೆ ಸೂರಿಗೆ ಗ್ಯಾರೆಂಟಿ ನೀಡಲಾಗುವುದು. ಈ ನೆಲದ ಮಣ್ಣಿನ ಋಣದಲ್ಲಿ ಬದುಕಿರುವುದರಿಂದ ಎಂದಿಗೂ ಸದಾ ನಿಮ್ಮೊಂದಿಗೆ ಇರುತ್ತೇವೆ” ಎಂದರು.

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, “ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಿಂದ ತನ್ನದೇ ಸಾಧನೆಗಳನ್ನು ದೇಶಕ್ಕೆ ಕೊಡುಗೆ ಕೊಟ್ಟಿದೆ. ಜೆಡಿಎಸ್ ಮತ್ತು ಬಿಜೆಪಿಯವರನ್ನು ಪ್ರಶ್ನೆ ಮಾಡಬೇಕು, ಜನರನ್ನು ಯಾಮಾರಿಸಿದ್ದು ಆಗಿದೆ. ಅವರ ಆಟ ಚುನಾವಣೆಯಲ್ಲಿ ನಡೆಯುವುದಿಲ್ಲವೆಂದು ಹೆಚ್ ಕ್ರಾಸ್‌ನಲ್ಲಿ ಟೋಕನ್ ಕೊಟ್ಟು ಜನರನ್ನು ಮತ್ತೊಮ್ಮೆ ಯಾಮಾರಿಸಲು ಹೊರಟಿದ್ದಾರೆ. ಜನ ಸ್ವಾಭಿಮಾನದಿಂದ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಧರ್ಮಸ್ಥಳ | ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ: ಆರು ಮಂದಿಯ ಬಂಧನ

ಎಂಎಲ್‌ಸಿ ಎಂ ಎಲ್ ಅನಿಲ್ ಕುಮಾರ್ ಮಾತನಾಡಿ, “ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಎಲ್ಲ ಜಾತಿ ಧರ್ಮಗಳಿಗೂ ಸಮಾಜಿಕ ನ್ಯಾಯದ ಅಡಿಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. 17 ವಾರ್ಡ್‌ಗಳಲ್ಲಿ ಪರಿಶಿಷ್ಟ ಜಾತಿ 5, ಹಿಂದುಳಿದ ವರ್ಗಕ್ಕೆ 5, ಒಕ್ಕಲಿಗ 4, ಪರಿಶಿಷ್ಟ ಪಂಗಡ 1, ಮುಸ್ಲಿಂ1 ಲಿಂಗಾಯತ 1 ಸ್ಥಾನಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿದೆ” ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಜಿ ಸಭಾಪತಿ ವಿ ಆರ್ ಸುದರ್ಶನ್, ಲೋಕಸಭಾ ಪರಾಜಿತ ಅಭ್ಯರ್ಥಿ ಕೆ ವಿ ಗೌತಮ್ ಮಾತನಾಡಿದರು. ವೇದಿಕೆಯಲ್ಲಿ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿಯ 17 ವಾರ್ಡ್‌ಗಳ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು, ಮುಖಂಡರಾದ ಚಂಜಿಮಲೆ ರಮೇಶ್ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ವೈ ಶಿವಕುಮಾರ್, ಮುನಿಯಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X