ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ 19.50 ಕಿ.ಮೀ. ವಿಸ್ತಾರದ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇಂದು(ಆಗಸ್ಟ್ 10ರಂದು) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ನಮ್ಮ ಮೆಟ್ರೊ ಹಳದಿ ಮಾರ್ಗ 5,056.99 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು 16 ನಿಲ್ದಾಣಗಳನ್ನು ಒಳಗೊಂಡಿವೆ.
ಇದನ್ನು ಓದಿದ್ದೀರಾ? ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನಾ ಕಾರ್ಯಕ್ರಮ: ಪತ್ರಕರ್ತರಿಗಿಲ್ಲ ವರದಿ ಮಾಡುವ ಅವಕಾಶ!
ಹಳದಿ ಮಾರ್ಗವು ಬೊಮ್ಮಸಂದ್ರ, ಹೆಬ್ಬಗೋಡಿ, ಹುಸ್ಕೂರು ರಸ್ತೆ, ಇನ್ಫೊಸಿಸ್ ಫೌಂಡೇಷನ್ (ಕೋನಪ್ಪನ ಅಗ್ರಹಾರ), ಎಲೆಕ್ಟ್ರಾನಿಕ್ ಸಿಟಿ, ಬೆರಟೇನ ಅಗ್ರಹಾರ, ಹೊಸ ರಸ್ತೆ, ಸಿಂಗಸಂದ್ರ, ಕೂಡ್ಲು ಗೇಟ್, ಹೊಂಗಸಂದ್ರ, ಬೊಮ್ಮನಹಳ್ಳಿ, ಸೆಂಟ್ರಲ್ ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜಯದೇವ ಆಸ್ಪತ್ರೆ, ರಾಗಿಗುಡ್ಡ, ಆರ್.ವಿ. ರಸ್ತೆ ನಿಲ್ದಾಣಗಳನ್ನು ಹೊಂದಿದೆ.
ಇನ್ನು ಇದೇ ಸಂದರ್ಭದಲ್ಲಿ ಬೆಳಗಾವಿ-ಬೆಂಗಳೂರು ಸೇರಿದಂತೆ ಮೂರು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಬೆಳಗಾವಿ-ಬೆಂಗಳೂರು ನಾಳೆಯಿಂದ ಜನರ ಸಂಚಾರಕ್ಕೆ ಲಭ್ಯವಾಗಲಿದೆ. ರೈಲು ಸಂಖ್ಯೆ 26751/26752.
