ತೀರ್ಥಹಳ್ಳಿ, ಸಾಲಗಾರರ ಕಿರುಕುಳದಿಂದ ಬೇಸತ್ತ ಲಾರಿ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗೆ ಬೈಲು ಸಮೀಪ ವರದಿಯಾಗಿದೆ.ಮಂಜುನಾಥ್ ಹೆಚ್( 37 ) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಪಟ್ಟಣದ ಕುರುವಳ್ಳಿ ವಾಸಿಯಾಗಿದ್ದ ಹಾಗೂ ಲಾರಿ ಮಾಲೀಕರಾಗಿದ್ದ ಮಂಜುನಾಥ್ ಹಲವು ಸಂಘ ಸಂಸ್ಥೆಗಳಲ್ಲಿ ಹಾಗೂ ಖಾಸಗಿ ಫೈನಾನ್ಸ್ ಗಳಲ್ಲಿ ಸಾಲ ಮಾಡಿಕೊಂಡಿದ್ದರು.
ಸಾಲ ಕೊಟ್ಟವರ ಕಿರುಕುಳದಿಂದ ಬೇಸತ್ತು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.