ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬನ್ನೂರ ಗ್ರಾಮದಲ್ಲಿ ಪಾನ್‌ಶಾಪ್ ಅಂಗಡಿ ಬೀಗ ಮುರಿದು ಕಳ್ಳತನ ಮಾಡಿದ ಘಟನೆ ನಡೆದಿದೆ.
ಗ್ರಾಮದ ಪ್ರಕಾಶ ಕುಂದ್ರಾಳ ಅವರಿಗೆ ಸೇರಿದ ಪಾನ್‌ಶಾಪ್ ಅಂಗಡಿಗೆ ತಡರಾತ್ರಿ ಇಬ್ಬರು ಕಳ್ಳರು ಆಗಮಿಸಿ ಬೀಗ ಮುರಿದು, ತಟ್ಟೆಯಲ್ಲಿದ್ದ ಸಿಗರೇಟ್ ಹಾಗೂ ಗುಟ್ಕಾ ಪ್ಯಾಕೆಟ್‌ಗಳನ್ನು ಕದ್ದೊಯ್ದಿದ್ದಾರೆ. ಈ ಘಟನೆ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ— ಟಿಕೆಟ್ ದರ ದುಬಾರಿ ದರ ಪಟ್ಟಿ ಇಲ್ಲಿದೆ
ಘಟನೆಯ ಮಾಹಿತಿ ದೊರಕಿದ ತಕ್ಷಣ ರಾಮದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.